ಬೆಂಗಳೂರು, (ಮೇ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಗುಡುಗು ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮುಖ್ಯವಾಗಿ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್ಗಳು ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಪರದಾಡುತ್ತಿದ್ದಾರೆ.
Published On – 7:01 pm, Tue, 26 May 26