ಬೆಂಗಳೂರಿನಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ – Kannada News | India’s Largest Railway Mega Coaching Terminal to Come Up in Bengaluru’s Yelahanka: V Somanna Announcement

ಬೆಂಗಳೂರು, ಫೆಬ್ರವರಿ 17: ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಮಹತ್ವದ ರೈಲ್ವೆ ಯೋಜನೆಗಳ ಕುರಿತು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯಲಹಂಕದಲ್ಲಿ 5754 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣವಾಗಲಿದ್ದು, ಇದು ಭಾರತದ ಅತಿದೊಡ್ಡ ಕೋಚಿಂಗ್ ಸೆಂಟರ್ ಆಗಲಿದೆ. ಆರಂಭದಲ್ಲಿ ದೇವನಹಳ್ಳಿಯಲ್ಲಿ ಪ್ರಸ್ತಾಪಿಸಲಾಗಿದ್ದ ಈ ಯೋಜನೆ, ದೂರದ ಕಾರಣ ಯಲಹಂಕಕ್ಕೆ ಸ್ಥಳಾಂತರಗೊಂಡಿದೆ. ರೈಲ್ವೆ ಮಂಡಳಿಯು ಯಲಹಂಕದಲ್ಲಿ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಅನುಮೋದನೆ ನೀಡಿದೆ ಎಂದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ 1370 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮಾಸ್ಟರ್ ಪ್ಲಾನ್ ಅನುಮೋದನೆ ಹಂತದಲ್ಲಿದೆ. ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಆಧುನೀಕರಣಕ್ಕಾಗಿ ತಲಾ 485-500 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ವೈಟ್‌ಫೀಲ್ಡ್‌ನಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದವರೆಗಿನ ನಾಲ್ಕು ಪಥದ ರೈಲ್ವೆ ಮಾರ್ಗ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ತುಮಕೂರು-ಬೆಂಗಳೂರು ನಾಲ್ಕು ಪಥದ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಕ್ಯಾಬಿನೆಟ್‌ಗೆ ಸಲ್ಲಿಸಲಾಗಿದೆ. ವೈಟ್‌ಫೀಲ್ಡ್‌ನಿಂದ ಕೋಲಾರಕ್ಕೆ ನೇರ ರೈಲು ಸಂಪರ್ಕಕ್ಕಾಗಿ ಸಮೀಕ್ಷೆ ನಡೆಸಲು ಡಿಆರ್‌ಎಂ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *