ಬೆಂಗಳೂರು, ಏಪ್ರಿಲ್ 17: ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್‌ನಿಂದ ಜಯದೇವ ಆಸ್ಪತ್ರೆ ಕಡೆ ಸಾಗುವ ರಸ್ತೆಯಲ್ಲಿ ಕಾರೊಂದನ್ನು ವೇಗವಾಗಿ ಓಡಿಸಿದ ಚಾಲಕ ಭಾರೀ ಶಬ್ದ ಮಾಡುವ ಮೂಲಕ ಸಾರ್ವಜನಿಕರಿಗೆ ಆತಂಕ ಉಂಟುಮಾಡಿದ್ದಾನೆ. ಮೊಡಿಫೈಡ್ ಸೈಲೆನ್ಸರ್‌ನಿಂದ ಬೆಂಕಿ ಹೊರಬರುವ ದೃಶ್ಯ ಕಂಡುಬಂದಿದ್ದು, ಅಕ್ಕಪಕ್ಕದ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವರದಿ: ನಟರಾಜ್, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ