ಬೆಂಗಳೂರಿನಲ್ಲಿ ನೀಟ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR – Kannada News | Fir against young woman in bengaluru Who provocative poster display During neet protest

ಬೆಂಗಳೂರು, (ಜುಲೈ 26): 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ (Umar Khalid) ಮತ್ತು ಶಾರ್ಜೀಲ್ ಇಮಾಮ್ ಪರ ಪೋಸ್ಟರ್‌ ಪ್ರದರ್ಶಿಸಿದ್ದ ಯುವತಿ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ಬೆಂಗಳೂರಿನ ಉಪ್ಪಾರಪೇಟೆ ಠಾಣೆಗೆ (Upparpet Police Station) ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ʻಗಲಭೆ ಉದ್ದೇಶದಿಂದ ಪ್ರಚೋದನೆʼ ನೀಡುವ ಆರೋಪದ ಮೇಲೆ ಕೇಸ್‌ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಏನಿದು ವಿವಾದ?

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ (ಜು.24) ಯುವತಿಯೊಬ್ಬಳು ಹಿಡಿದಿದ್ದ ಪೋಸ್ಟರ್‌ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರತಿಭಟನೆಗೆ ಬಂದಿದ್ದ ಆಕೆ ಗಲಭೆ ಪ್ರಕರಣದ ಆರೋಪಿಗಳಾದ ಉಮರ್‌ ಖಾಲಿದ್‌ ಹಾಗೂ ಶಾರ್ಜೀಲ್ ಇಮಾಮ್ ಪರವಾಗಿ ಘೋಷಣೆಗಳಿರುವ ಪೋಸ್ಟರ್‌ಗಳನ್ನ ಪ್ರದರ್ಶಿಸಿದ್ದಳು. ಅಷ್ಟೇ ಅಲ್ಲದೇ ʻUkhad Le BLR Policeʼ ಎಂಬ ಬರಹವನ್ನು ಪೋಸ್ಟರ್‌ನಲ್ಲಿ ಪ್ರದರ್ಶಿಸಿ, ಬೆಂಗಳೂರು ಪೊಲೀಸರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಳು.

ಇದನ್ನೂ ಓದಿ: Cockroach Janta Party: ಏನಿದು ‘ಕಾಕ್ರೋಚ್ ಜನತಾ ಪಾರ್ಟಿ’? ಇಂಟರ್‌ನೆಟ್ ಮೀಮ್‌ನಿಂದ ಶಿಕ್ಷಣ ಸಚಿವರ ರಾಜೀನಾಮೆಯವರೆಗೆ ಯುವ ಕ್ರಾಂತಿಯ ಪೂರ್ಣ ವರದಿ

ಈ ಪೋಸ್ಟರ್‌ಗಳು ಅಲ್ಲಿದ್ದ ಪೊಲೀಸರ ಗಮನ ಸೆಳೆದು, ಪರಿಸ್ಥಿತಿ ಉದ್ವಿಗ್ನವಾಗದಂತೆ ಪೊಲೀಸರು ತಕ್ಷಣವೇ ಪೋಸ್ಟರ್‌ಗಳನ್ನ ವಶಪಡಿಸಿಕೊಂಡಿದ್ದರು. ಇದೇ ವೇಳೆ ಅಲ್ಲಿದ್ದ ಇತರ ವಿದ್ಯಾರ್ಥಿಗಳು ಆಕೆಗೆ ಕ್ಲಾಸ್‌ ತೆಗದುಕೊಂಡು, ಪ್ರತಿಭಟನಾ ಸ್ಥಳದಿಂದ ಕಳುಹಿಸಿದ್ದರು. ಇದೀಗ ಈ ಸಂಬಂಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *