ಬೆಂಗಳೂರು, ಆಗಸ್ಟ್ 10: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ತ್ರಿವರ್ಣ ಧ್ವಜ ಯಾತ್ರೆ ನಡೆಯಿತು. ಕೆ.ಸಿ. ಜನರಲ್ ಆಸ್ಪತ್ರೆಯ ಮುಂಭಾಗದ ಸರ್ಕಾರಿ ಶಾಲೆಯ ಬಳಿಯಿಂದ ಆರಂಭವಾದ ಈ ಯಾತ್ರೆಯ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್ ಸೇರಿದಂತೆ ಹಲವು ಪ್ರಮುಖ ನಾಯಕರು ವಹಿಸಿದ್ದರು. ಯಾತ್ರೆಯ ಉದ್ದಕ್ಕೂ “ಭಾರತ್ ಮಾತಾ ಕಿ ಜೈ”, “ವಂದೇ ಮಾತರಂ”ನಂತಹ ಘೋಷಣೆಗಳು ಮೊಳಗಿದವು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
