ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮುಖ್ಯಾಂಶಗಳು
- ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ
- ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು
- ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ
ನಡೆದಿದ್ದೇನು?
ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿದಿದೆ. ಇತ್ತ ಕಾರ್ಮಿಕರು ಪಟೇಲ್ ಎಂಬುವರಿಗೆ ಸೇರಿದ ಸೈಟ್ನಲ್ಲಿ ಗೋಡೆ ನಿರ್ಮಾಣದ ಕೆಲಸ ಮಾಡುತ್ತಿದ್ದರು. ಮಳೆಯಿಂದಾಗಿ ಕೆಲಸ ಮಾಡುತ್ತಿರುವಾಗಲೇ ಗೋಡೆ ಕುಸಿದು ಕಾರ್ಮಿಕರು ಇಬ್ಬರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ
ದುರಂತ ನಂತರ ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
Published On – 9:47 pm, Sun, 31 May 26