ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ

ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ

ಬೆಂಗಳೂರು, ಏಪ್ರಿಲ್ 09):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಾನಗೇಡಿ ಕೃತ್ಯವೊಂದು ನಡೆದಿದೆ.  ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ (Bihar) ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಪ್ರಾಪ್ತೆ ಕೈಗೆ 150 ರೂಪಾಯಿ ಕೊಟ್ಟು ಎಸ್ಪೇಪ್ ಆಗಿದ್ದ ಮೊಹಮ್ಮದ್ ಮುನ್ನ ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ ದುಡಿಯಲೆಂದು ಬಿಹಾರದಿಂದ ಬೆಂಗಳೂರಿಗೆ ಬಂದು ಈ ನೀಚ ಕೃತ್ಯ ಎಸಗಿದ್ದಾನೆ.

ಆರೋಪಿ ಮೊಹಮ್ಮದ್ ಮುನ್ನ ನಿನ್ನೆ (ಏಪ್ರಿಲ್ 08) ಸಂಜೆ ಮನೆ ಬಳಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಳಿಕ ಇದನ್ನು ಯಾರಿಗೂ ಹೇಳಬೇಡ ಎಂದು ಬಾಲಕಿ ಕೈಗೆ 150 ರೂಪಾಯಿ ಕೊಟ್ಟು ಪರಾರಿಯಾಗಿದ್ದ.

ಇದನ್ನೂ ಓದಿ: ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಇನ್ನೊಂದೆಡೆ ಕೆಲ ಸಮಯದವರೆಗೆ ಮನೆ ಬಳಿ ಬಾಲಕಿ ಕಾಣದಿದ್ದಾಗ ಆತಂಕಕ್ಕೆ ಒಳಗಾಗಿದ್ದ ಪೋಷಕರು ಅಕ್ಕಪಕ್ಕದಲ್ಲಿ ಹುಡುಕಾಡಿದ್ದಾರೆ. ಬಳಿಕ ಕೆಲ ಹೊತ್ತಿನ ನಂತರ ಬಾಲಕಿ ಮನೆಗೆ ಬಂದಿದ್ದು, ಈ ವೇಳೆ ಬಾಲಕಿ ಕೈಯಲ್ಲಿ 150 ರೂ.ಹಣ ಇರುವುದನ್ನು ಪೋಷಕರು ನೀಡಿದ್ದಾರೆ. ನಂತರ ಹಣದ ಬಗ್ಗೆ ವಿಚಾರಿಸಿದಾಗ ಬಾಲಕಿ, ಮುನ್ನನ ನೀಚ ಕೃತ್ಯವನ್ನು ಬಿಚ್ಚಿಟ್ಟಿದ್ದಾಳೆ. ಕೂಡಲೇ ಪೋಷಕರು ಕೂಡಲೇ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು, ಬಿಹಾರ ಮೂಲದ ಮೊಹಮ್ಮದ್ ಮುನ್ನ ಎನ್ನುವಾತನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *