ಬೆಂಗಳೂರು, (ಆಗಸ್ಟ್ 17): ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಬೆಳ್ಳಂದೂರು ಪೊಲೀಸರು (Bellandur Police) ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್ (Gelatin) ಜಪ್ತಿ ಮಾಡಿದ್ದಾರೆ. ಬೆಂಗಳೂರು (Bengaluru) ನಗರದ ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತಯ. ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಈ ವೇಲೆ ಬರೋಬ್ಬರಿ 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ. ಭೋಗನಹಳ್ಳಿಯಲ್ಲಿ ಆದರ್ಶ ಕಂಪನಿಯಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯ ವೇಳೆ ದೊಡ್ಡ ಕಲ್ಲಿನ ಬಂಡೆಗಳು ಪತ್ತೆಯಾಗಿವೆ. ಅವುಗಳನ್ನು ತೆರವುಗೊಳಿಸಲು ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳದೆ ಜಿಲೆಟಿನ್ ಬಳಸಿ ಬಂಡೆಗಳನ್ನು ಸ್ಫೋಟಿಸಲಾಗುತ್ತಿತ್ತು ಎನ್ನಲಾಗಿದೆ. ಹಾಗಾದ್ರೆ, ಇಷ್ಟೊಂದು ಜಿಲೆಟಿನ್ ಸಂಗ್ರಹಿಸಿಕೊಟ್ಟುಕೊಳ್ಳಬಹುದಾ? ಯಾರು ಯಾರ ಅನುಮತಿ ಪಡೆಯಬೇಕು? ಈ ಪ್ರಕರಣದ ಸಂಪೂರ್ಣ ವಿವರ ವಿಡಿಯೋನಲ್ಲಿ ನೋಡಿ.