ಬೆಂಗಳೂರು, (ಮೇ 01): ಬೆಂಗಳೂರಿನಲ್ಲಿಂದು ಆರ್.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ (Bengaluru’s double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಚಾಲನೆ ನೀಡಿದರು.
ಸಿಲ್ಕ್ ಬೋರ್ಡ್ ಜಂಕ್ಷನ್‌ನ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್ ಅನುಕೂಲವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸೈವಾಕ್ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗಲಿ ಎಂದು ಈ ಸ್ಕೈವಾಕ್ ನಿರ್ಮಿಸಲಾಗುತ್ತಿದೆ.
