ಬೆಂಗಳೂರಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ – Kannada News | Bengaluru STP Mishap: Two Laborers from Bihar and Tamil Nadu Missing After Falling into 40 Foot Sewage Tank in Varthur

ಬೆಂಗಳೂರು, ಜೂನ್ 19: ಬೆಂಗಳೂರಿನ ವರ್ತೂರಿನ ಬೆಳಗೆರೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಆತಂಕಕಾರಿ ಘಟನೆ ನಡೆದಿದ್ದು, ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಸುಮಾರು 40 ಅಡಿ ಆಳದ ಟ್ಯಾಂಕ್‌ಗೆ ಇಳಿದಿದ್ದಾಗ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದಿದ್ದಾರೆ. ಬಿಹಾರದ ಬ್ರಿಜೇಶ್ ಮತ್ತು ತಮಿಳುನಾಡಿನ ಅಖಿಲೇಶ್ ನಾಪತ್ತೆಯಾಗಿದ್ದು, ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಕಾರ್ಮಿಕರು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ, ಟ್ಯೂಬ್ ಅಥವಾ ಆಮ್ಲಜನಕ ಕಿಟ್‌ಗಳನ್ನು ಬಳಸದೆ ಟ್ಯಾಂಕ್‌ಗೆ ಇಳಿದಿದ್ದರು, ಇದರಿಂದಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಸದ್ಯ ನಾಪತ್ತೆಯಾಗಿರುವ ಇಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬಿಡಬ್ಲ್ಯೂಎಸ್ಎಸ್‌ಪಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಟ್ಯಾಂಕ್‌ನಲ್ಲಿ ಲಕ್ಷಾಂತರ ಲೀಟರ್ ಸೀವೇಜ್ ನೀರು ಸಂಗ್ರಹವಾಗುತ್ತದೆ. ಕಾರ್ಮಿಕರು ಡ್ರೈನೇಜ್ ಪ್ಲ್ಯಾಂಟ್‌ನ ಒಳಗೆ ಏಣಿ ಮೂಲಕ ಇಳಿದು ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಟ್ಯಾಂಕ್ ಒಳಭಾಗದಲ್ಲಿ ಆಮ್ಲಜನಕದ ಕೊರತೆ ಇರುವ ಸಾಧ್ಯತೆ ಹೆಚ್ಚಿರುವುದರಿಂದ ಕೆಲಸಗಾರರಿಗೆ ಸುರಕ್ಷತಾ ಕಿಟ್, ಆಮ್ಲಜನಕ ಉಪಕರಣ ಹಾಗೂ ಇತರ ರಕ್ಷಣಾ ಸಾಧನಗಳನ್ನು ಒದಗಿಸುವುದು ಕಡ್ಡಾಯ. ಆದರೆ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಕಾರ್ಮಿಕರನ್ನು ಒಳಗೆ ಇಳಿಸಲಾಗಿತ್ತು ಎಂಬ ಆರೋಪಗಳೂ ಈಗ ಕೇಳಿಬಂದಿವೆ. ಕೋರಮಂಗಲದಿಂದ ವರ್ತೂರು ಭಾಗದವರೆಗೆ ಹರಿದು ಬರುವ ಡ್ರೈನೇಜ್ ನೀರು ಈ ಘಟಕಕ್ಕೆ ಬರುತ್ತದೆ. ಟ್ಯಾಂಕ್‌ನಲ್ಲಿ ಸುಮಾರು ಹತ್ತು ಅಡಿ ಎತ್ತರದವರೆಗೆ ಕೊಳಚೆ ನೀರು ಸಂಗ್ರಹವಾಗಿದ್ದು, ಅಲ್ಲಿಂದ ದೊಡ್ಡ ಪೈಪ್‌ಗಳ ಮೂಲಕ ನೀರನ್ನು ಫಿಲ್ಟರ್ ಮಾಡುವ ಪ್ರಕ್ರಿಯೆ ನಡೆಯುತ್ತದೆ.

ವರದಿ: ನಟರಾಜ್, ಟಿವಿ9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *