ಬೆಂಗಳೂರು, ಜುಲೈ 09: ನಗರದ ಮಾಗಡಿ ಮುಖ್ಯರಸ್ತೆ ಸಮೀಪದ ಬ್ಯಾಡರಹಳ್ಳಿ ಮತ್ತು ಭಾರತ್ ನಗರ ಪ್ರದೇಶಗಳಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಭೀತಿ ಸೃಷ್ಟಿಸಿದೆ. ನೈಸ್ ರಸ್ತೆ ಬಳಿ ಬೆಳಗ್ಗೆ 4 ಗಂಟೆ ಸುಮಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೆಲ ಸ್ಥಳಗಳಲ್ಲಿ ಬಲೆ ಹಾಕಲಾಗಿದ್ದು, ಅದನ್ನು ಹೊರಬರುವಂತೆ ಮಾಡಲು ಪಟಾಕಿ ಸಹ ಹೊಡೆಯಲಾಗಿದೆ. ಸ್ಥಳೀಯರ ಪ್ರಕಾರ, ಕಳೆದ 10 ವರ್ಷಗಳಲ್ಲಿ ಈ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಇದೇ ಮೊದಲು. ಸದ್ಯ ಸ್ಥಳೀಯರು ಆತಂಕಗೊಂಡಿದ್ದು, ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
