ಬೆಂಗಳೂರು: ಕ್ಲಾಸಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಲವ್‌ ಯು ಎಂದ ಪ್ರೊಪೋಸರ್ ಅರೆಸ್ಟ್

ಬೆಂಗಳೂರು: ಕ್ಲಾಸಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಲವ್‌ ಯು ಎಂದ ಪ್ರೊಪೋಸರ್ ಅರೆಸ್ಟ್

ಬೆಂಗಳೂರು, (ಮಾರ್ಚ್ 27): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟಿ.ಬೇಗೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕ ಅಬ್ದುಲ್ ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.  ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದು, ನಂತರ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಳು. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ಸದ್ಯ ಮೈಕ್ರೋಬಯಾಲಾಜಿ ವಿಷಯದ ಪ್ರಾಧ್ಯಾಪಕ ನೆಲಮಂಗಲ ನಿವಾಸಿ  ಅಬ್ದುಲ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಮಾರ್ಚ್ 23ರಂದು ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರ ಕಾಲೇಜಿನಲ್ಲಿ ಡಾ. ಅಬ್ದುಲ್ ರೆಹಮಾನ್ ಷರೀಫ್ ಎಂಬ ಪ್ರಾಧ್ಯಾಪಕ, ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದಳು. ಈ ಹಿಂದೆ ನೀನು ನನಗೆ ಪ್ರಪೋಸ್​ ಮಾಡಿಲ್ವಾ ಎಂದು ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಕೇಳಿದ್ದು, ಸಾಕ್ಷಿಗೆ ಸಿಸಿಟಿವಿ ದೃಶ್ಯವಿದೆ ಎಂದಿದ್ದನು. ಕೋಪಗೊಂಡ ವಿದ್ಯಾರ್ಥಿನಿ ಸಿಸಿಟಿವಿ ವಿಡಿಯೋ ತೋರಿಸು ಎಂದಿದ್ದಾಳೆ. ಈ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಪ್ರಾಧ್ಯಾಪಕ​ ಕ್ಲಾಸ್​​ನಿಂದ ಹೊರಗೆ ಹೋಗಿದ್ದನು. ಈ ಘಟನೆಯಿಂದ ತೀವ್ರವಾಗಿ ಆಕ್ರೋಶಗೊಂಡು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು.

ಇದನ್ನೂ ನೋಡಿ: ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ವೈರಲ್ ಆದ ಹಲ್ಲೇ ವಿಡಿಯೋ:

ಅಬ್ದುಲ್ ಮಾತುಗಳಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯ ಸಹಪಾಠಿಗಳು ಸ್ತ್ರೀಕುಲಕ್ಕೆ ಗೌರವ ಇಲ್ಲವೇ? ಎಂದು ಪ್ರಶ್ನಿಸಿದ್ದು, ಕಾಲೇಜು ಕ್ಯಾಂಪಸ್‌ನಲ್ಲಿಯೇ ಅಟ್ಟಾಡಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೇ ಸ್ವತಃ ವಿದ್ಯಾರ್ಥಿನಿಯೇ ಚಪ್ಪಲಿ ಸೇವೆ ಮಾಡಿದ್ದಾಳೆ. ವಿದ್ಯಾರ್ಥಿಗಳಿಂದ ಧರ್ಮದೇಟು ತಿಂದ ಬಳಿಕ ಅಬ್ದುಲ್ ಅಲ್ಲಿಂದ ಓಡಿ ಹೋಗಿದ್ದಾನೆ. ಘಟನೆ ನಂತರ ಕಾಲೇಜು ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ಬೆನ್ನಲ್ಲೇ ನೆಲಮಂಗಲ ಗ್ರಾಮಾಂತರ ಪೊಲೀಸರು ಕಾಲೇಜಿಗೆ ಭೇಟಿ ನೀಡಿದ್ದು, ಘಟನೆ ಕುರಿತು ವಾಸ್ತವಾಂಶಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪ್ರಾಧ್ಯಾಪಕ ಅಬ್ದುಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *