ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ: ವಿಡಿಯೋ ವೈರಲ್
Image Credit source: Siraj Noorani X Account
ಬೆಂಗಳೂರು, ಜುಲೈ 07: ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿದ್ದ ಕುಟುಂಬದ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಂಡ್ಯ ಜಿಲ್ಲೆಯ ಮದ್ದೂರು ಸಮೀಪದ ಎಕ್ಸ್ಪ್ರೆಸ್ವೇನಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಹಿಂಬದಿಯಿಂದ ಬರುತ್ತಿದ್ದ ವಾಹನದ ಡ್ಯಾಶ್ಕ್ಯಾಮ್ನಲ್ಲಿ ಘಟನೆಯ ಸಂಪೂರ್ಣ ದೃಶ್ಯ ದಾಖಲಾಗಿದೆ.
ವೈರಲ್ ವಿಡಿಯೋದಲ್ಲಿ ಏನಿದೆ?
🚨Shocking Video: Mob Assaults Family on Bengaluru-Mysuru Expressway
A horrifying dashcam video from the Maddur stretch shows a group of men attacking a family in a blue car in broad daylight. They forced open the door, rained blows on the driver (possibly with a metal object),… pic.twitter.com/j82vy6WXf8
— Siraj Noorani (@sirajnoorani) July 7, 2026
ವೈರಲ್ ವಿಡಿಯೋದಲ್ಲಿ, ಕೆಲವರು ಹೆದ್ದಾರಿಯ ಮಧ್ಯೆಯೇ ನೀಲಿ ಬಣ್ಣದ ಕಾರನ್ನು ಅಡ್ಡಗಟ್ಟಿ, ಬಲವಂತವಾಗಿ ಬಾಗಿಲು ತೆರೆದು ಚಾಲಕನ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಕಾರಿನಲ್ಲಿ ಮಹಿಳೆ ಮತ್ತು ಮಗು ಸೇರಿ ನಾಲ್ಕೈದು ಮಂದಿ ಇದ್ದರು ಎನ್ನಲಾಗಿದ್ದು, ಗುಂಪಿನಲ್ಲಿದ್ದ ಕೆಲವರು ಚಾಲಕನಿಗೆ ನಿರಂತರವಾಗಿ ಥಳಿಸಿದ್ದಾರೆ. ಒಬ್ಬ ವ್ಯಕ್ತಿ ಲೋಹದ ವಸ್ತುವಿನಂತಿದ್ದ ಆಯುಧದಿಂದ ಹೊಡೆಯುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ. ಸ್ವಲ್ಪ ಸಮಯದ ಬಳಿಕ ಸ್ಥಳದಲ್ಲಿದ್ದ ಇತರ ವಾಹನ ಸವಾರರು ಮಧ್ಯಪ್ರವೇಶಿಸಿ ಹಲ್ಲೆಯನ್ನು ತಡೆಯಲು ಪ್ರಯತ್ನಿಸಿದ್ದಾರೆ. ಘಟನೆಯ ಕೊನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಹೊರಬಂದು ದುಷ್ಕರ್ಮಿಗಳ ಬಳಿ ಹಲ್ಲೆ ನಿಲ್ಲಿಸುವಂತೆ ಮನವಿ ಮಾಡುತ್ತಿರುವುದು ಕಾಣಿಸುತ್ತದೆ. ಆದರೂ ಚಾಲಕನನ್ನು ಕಾರಿನಿಂದ ಹೊರಗೆ ಎಳೆದು ಥಳಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು ಡೇ ಕೇರ್ ಕ್ರೌರ್ಯ; ಸಿಸಿಟಿವಿ ದೃಶ್ಯ ಆಧರಿಸಿ ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿ ಇಬ್ಬರು ಅರೆಸ್ಟ್!
ಅಪಘಾತವೇ ಹಲ್ಲೆಗೆ ಕಾರಣ
ಮಾಹಿತಿಯ ಪ್ರಕಾರ, ಶ್ರೀರಂಗಪಟ್ಟಣ ಟೋಲ್ಗೇಟ್ ಸಮೀಪ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಸಂತ್ರಸ್ತರ ಕಾರು ಮತ್ತು ಆರೋಪಿಗಳ ಕಾರಿನ ನಡುವೆ ಸಣ್ಣ ಅಪಘಾತ ಸಂಭವಿಸಿತ್ತು. ಅಪಘಾತದ ಬಳಿಕ ಎರಡೂ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದರೂ, ನಂತರ ತಮ್ಮ ತಮ್ಮ ದಾರಿಯಲ್ಲಿ ತೆರಳಿದ್ದರು. ಆದರೆ ಬಳಿಕ ತಮ್ಮ ಕಾರಿಗೆ ಹೆಚ್ಚಿನ ಹಾನಿಯಾಗಿರುವುದು ಗಮನಿಸಿದ ಆರೋಪಿಗಳು ಮತ್ತೊಂದು ಕಾರನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಚಾಲಕ ವಾಹನ ನಿಲ್ಲಿಸದ ಕಾರಣ, ಎಕ್ಸ್ಪ್ರೆಸ್ವೇನಲ್ಲಿ ಬೆನ್ನಟ್ಟಿ ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 2:22 pm, Tue, 7 July 26