ಬೆಂಗಳೂರು, ಜುಲೈ 28: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಸೋಮವಾರ ರಾತ್ರಿ ವೇಳೆ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಸ್ಕೂಟಿಯಲ್ಲಿ ಬಂದ ವ್ಯಕ್ತಿಯೊಬ್ಬ ಯುವತಿಯ ಬಳಿ ಹೋಗಿ, ‘ನಿನ್ನ ರೇಟ್ ಎಷ್ಟು? ಹತ್ತು ಸಾವಿರ ಕೊಡುತ್ತೇನೆ, ಬರುತ್ತೀಯಾ?’ ಎಂದು ಪ್ರಶ್ನಿಸಿದ್ದಾನೆ. ಯುವತಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಪೊಲೀಸ್ ದೂರು ನೀಡುವುದಾಗಿ ಹೇಳಿದಾಗ, ಆತ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಲ್ಲಿಂದ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.
ಯುವತಿ ಈ ಇಡೀ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
