ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ

ಬೆಂಗಳೂರು, ಮಾರ್ಚ್ 30: ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗೆ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ ಇದೇ ಅವಧಿಯಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 39-40 ಡಿಗ್ರಿ ಸೆಲ್ಸಿಯಸ್ ತಲುಪುವ ಸಂಭವವಿದೆ. ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ 37-39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ನಿರೀಕ್ಷೆಯಿದೆ. ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *