Headlines

ಬೆಂಗಳೂರು ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ: ದಕ್ಷಿಣ ಕನ್ನಡಕ್ಕೆ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ – Kannada News | Karnataka rain update imd forecasts heavy rainfall in coastal and malenadu regions

ಬೆಂಗಳೂರು, ಆ.1: ರಾಜ್ಯದ ದಕ್ಷಿಣ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ (Light to Moderate Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವರದಿಯ ಪ್ರಕಾರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಸೇರಿದಂತೆ ಒಟ್ಟು 13 ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ತಗ್ಗು ಪ್ರದೇಶಗಳು ಹಾಗೂ ಮಳೆ ಪೀಡಿತ ರಸ್ತೆಗಳಲ್ಲಿ ಸಂಚರಿಸುವಾಗ ವಾಹನ ಸವಾರರು ಜಾಗರೂಕರಾಗಿರಲು ಹಾಗೂ ವಿದ್ಯುತ್ ಕಂಬ, ಹಳೆಯ ಕಟ್ಟಡಗಳ ಬಳಿ ನಿಲ್ಲದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮಂಗಳೂರಿನ ಹಲವು ಭಾಗದಲ್ಲಿ ಭೂಕುಸಿತ ಕೂಡ ಆಗಿದೆ. ದಕ್ಷಿಣ ಕನ್ನಡದಲ್ಲಿ ಭಾರೀ ಗಾಳಿ ಮಳೆ ಇದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಭಾರಿ ಯಿಂದ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್‌ಐವಿ ಸೋಂಕು ವದಂತಿ ಸುಳ್ಳು: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಇರಲಿದ್ದು, ಮಲೆನಾಡಿನ ಘಟ್ಟ ಪ್ರದೇಶಗಳು ಹಾಗೂ ಕರಾವಳಿಯ ನದಿ ತೀರದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದೆ. ನಿರಂತರ ಸಾಧಾರಣದಿಂದ ಭಾರಿ ಮಳೆ ಹಾಗೂ ಬಿರುಸಿನ ಗಾಳಿ ಬೀಸುವ ಸಾಧ್ಯತೆಯಿದೆ. ತಗ್ಗು ಪ್ರದೇಶದ ನಿವಾಸಿಗಳಿಗೆ ಹಾಗೂ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಆಡಳಿತ ಸೂಚಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *