ಬೆಂಗಳೂರು, ಮೇ.6 : ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಅವರ ವಿಡಿಯೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಚಿತ್ರೀಕರಿಸಿರುವ ಬಗ್ಗೆ ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.
ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಬುಧವಾರ ಬೆಳಿಗ್ಗೆ ಸುಮಾರು 9.30ರ ಸುಮಾರಿಗೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಒಬ್ಬರು ಮೊಬೈಲ್ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಇನ್ನು ಈ ಘಟನೆಯಿಂದ ಯುವತಿಯು ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದು ಎಂಬ ಆತಂಕ ಅವರನ್ನು ಕಾಡುತ್ತಿದೆ. ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
