ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ಸಿಲುಕಿ ರೋಗಿ ನರಳಾಟ – Kannada News | Bengaluru–Hosur National Highway Traffic Jam for Kilometres, Ambulance Stuck and Patient Suffers

ಆನೇಕಲ್, ಜನವರಿ 9: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಮ್ಮೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಚಂದಾಪುರದಿಂದ ಅತ್ತಿಬೆಲೆವರೆಗೆ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ದೂರ ವಾಹನಗಳು ಸರಿಯದೇ ನಿಂತಿದ್ದು, ಹೆದ್ದಾರಿ ಸಂಪೂರ್ಣವಾಗಿ ಸ್ಥಬ್ಧಗೊಂಡಿತ್ತು. ಟ್ರಾಫಿಕ್ ಜಾಮ್ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿ, ರೋಗಿಯೊಬ್ಬರು ನರಳಾಡುವಂತಾಯಿತು. ರೋಗಿಯನ್ನು ಬೇಗ ಆಸ್ಪತ್ರೆಗೆ ತಲುಪಿಸಲು ಆ್ಯಂಬುಲೆನ್ಸ್ ಚಾಲಕ ಸಾಕಷ್ಟು ಪ್ರಯತ್ನಪಟ್ಟರೂ, ವಾಹನಗಳ ದಟ್ಟಣೆಯಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಟ್ರಾಫಿಕ್ ಜಾಮ್‌ನ ಪರಿಣಾಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸಹ ತೀವ್ರ ತೊಂದರೆಗೆ ಒಳಗಾದರು. ಸಮಯಕ್ಕೆ ಶಾಲೆ–ಕಾಲೇಜು ತಲುಪಲು ಸಾಧ್ಯವಾಗದೆ, ಮಕ್ಕಳು ಮತ್ತು ಪೋಷಕರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಕಳೆದ ಒಂದೂವರೆ ವರ್ಷದಿಂದ ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದೇ ನಿತ್ಯದ ಟ್ರಾಫಿಕ್ ಜಾಮ್‌ಗೆ ಪ್ರಮುಖ ಕಾರಣ ಎನ್ನಲಾಗಿದೆ. ಚಂದಾಪುರದಿಂದ ಅತ್ತಿಬೆಲೆವರೆಗೆ ಪ್ರತಿದಿನವೂ ಸಂಚಾರ ದುಸ್ಥರವಾಗುತ್ತಿದ್ದು, ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *