ತನ್ನ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ತನ್ನದೇ ಮನೆಯಲ್ಲಿ ಇರುವುದನ್ನು ಕಂಡು 37 ವರ್ಷದ ವ್ಯಕ್ತಿಯೊಬ್ಬರು ತೀವ್ರ ಆಘಾತದಿಂದ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಲಾಗಿರುವ ವಿಡಿಯೋವೊಂದು ಎಕ್ಸ್ ಖಾತೆಯಲ್ಲಿ ವೈರಲ್ ಆಗಿದೆ. ಪತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ ತನ್ನ 25 ವರ್ಷದ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡಿದ್ದಾನೆ ಎಂದು ಹೇಳಲಾಗಿದೆ. ಅತಿಯಾದ ಮಾನಸಿಕ ಒತ್ತಡ ಮತ್ತು ಭಾವನಾತ್ಮಕ ನೋವಿನಿಂದಾಗಿ ಆತನ ರಕ್ತದೊತ್ತಡದಲ್ಲಿ ಏರುಪೇರಾಗಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಗಂಡ ಬಿದ್ದಿರುವುದನ್ನು ಕಂಡು ಹೆಂಡತಿ ನನ್ನನ್ನು ಕ್ಷಮಿಸು ಎಂದು ಗೋಳಾಡುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದಿಲ್ಲ. ಭಾಷೆಯನ್ನು ನೋಡಿದಾಗ ಇದು ಉತ್ತರ ಭಾರತದ ಘಟನೆ ಎಂದು ತಿಳಿಯುತ್ತದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
