ಬೆಳಗಾವಿ, ಜನವರಿ 21: ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವ ಕೈದಿ ಗಾಯಗೊಂಡಿದ್ದಾನೆ. ಎಸ್‌ಟಿಡಿ ಫೋನ್ ಕಾಲ್ ವಿಚಾರವಾಗಿ ಕೈದಿಗಳ ಮಧ್ಯೆ ಘರ್ಷಣೆ ಶುರುವಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಮೂಲದ ಫಯಾನ್, ಬೆಳಗಾವಿ ಮೂಲದ ಮತ್ತೊಬ್ಬ ಅತ್ಯಾಚಾರ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ದಾನೆ. ಗಾಯಾಳು ಸುರೇಶ್ನನ್ನು ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.