ಕೋಲಾರ, ಏಪ್ರಿಲ್ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್ಪೆಕ್ಟರ್ಗಳು ಮತ್ತು ಐದು ಇನ್ಸ್ಪೆಕ್ಟರ್ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು. ಈ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ರೌಡಿಗಳ ಮನೆಗಳಲ್ಲಿ ಲಾಂಗ್ ಮತ್ತು ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.