ಬೆಂಗಳೂರು, ಫೆಬ್ರವರಿ 17: ರಸ್ತೆ ದಾಟುತ್ತಿದ್ದ ಯುವತಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಯೋಗೇಶ್ವರಿ (26) ಮೃತ ದುರ್ದೈವಿ. ರಾಜಾಜಿನಗರದ HDFC ಬ್ಯಾಂಕ್ ಹೋಮ್ ಲೋನ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಯೋಗೇಶ್ವರಿ, ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆಗೆ ಬಗ್ಗೆ ತನಿಖೆ ನಡೆಯುತ್ತಿದೆ.
ವರದಿ: ನಟರಾಜ್, ಟಿವಿ9 ಬೆಂಗಳೂರು
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.