ಬೆಂಗಳೂರು, ಜುಲೈ 10: ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಮತ್ತು ಭಾರತ ನಗರ ಪ್ರದೇಶಗಳಲ್ಲಿ ಚಿರತೆ ಆತಂಕ ಸಾರ್ವಜನಿಕರಲ್ಲಿ ಮುಂದುವರಿದಿದೆ. ಸತತ ಮೂರು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ನಿನ್ನೆ ಇಡೀ ದಿನ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ, ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ನಿನ್ನೆ ರಾತ್ರಿ ಸುಮಾರು 9.30ರ ಸುಮಾರಿಗೆ ಹಾಗೂ ಇಂದು ಮುಂಜಾನೆ 4.30ರ ಸುಮಾರಿಗೆ ಅದೇ ಜಾಗದಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದೆ.
ಚಿರತೆ ಕಾಣಿಸಿಕೊಂಡಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ರಸ್ತೆಯಲ್ಲಿ ಶರವೇಗದಲ್ಲಿ ಚಲಿಸಿ ಬೇಲಿ ಹಾರುತ್ತಿರುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ನಿರಂತರ ಕಾರ್ಯಾಚರಣೆಯ ಹೊರತಾಗಿಯೂ ಚಿರತೆ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿರುವುದು ಅರಣ್ಯ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಚಿರತೆ ಸೆರೆಗೆ ಇಂದಿನ ಕಾರ್ಯಾಚರಣೆಯಲ್ಲಿ ಡ್ರೋನ್ ಬಳಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸುತ್ತಿದೆ. ನಗರ ಬೆಳೆದಂತೆ ಕಾಡುಪ್ರಾಣಿಗಳ ಆವಾಸಸ್ಥಾನಗಳು ಕುಗ್ಗುತ್ತಿದ್ದು, ಅವು ಆಹಾರ ಮತ್ತು ನೀರು ಹುಡುಕಿ ನಗರ ಪ್ರದೇಶಗಳಿಗೆ ಪ್ರವೇಶಿಸುತ್ತಿವೆ ಎಂದು ತಜ್ಞರು ಹೇಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
