ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್‌ನ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಸ್ರೇಲ್‌ನ ಸಂಸತ್ ಕೆನೆಸೆಟ್‌ನಲ್ಲಿ ಭಾಷಣ ಮಾಡಿದ್ದಾರೆ. ಭಾರತದ ಪ್ರಧಾನಿಯೊಬ್ಬರು ಇಸ್ರೇಲ್ ಸಂಸತ್ನಲ್ಲಿ ಮಾಡುತ್ತಿರುವ ಮೊದಲ ಭಾಷಣ ಇದಾಗಿದ್ದರಿಂದ ಇದು ಐತಿಹಾಸಿಕ ಕ್ಷಣವಾಗಿದೆ. ಹಲವು ವರ್ಷಗಳಿಂದ ಭಾರತದಲ್ಲಿ ಭಯೋತ್ಪಾದನಾ ದಾಳಿಗಳು ನಡೆದಿವೆ. ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ಭಯೋತ್ಪಾದನೆಯು ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಅತ್ಯಂತ ದೊಡ್ಡ ಬೆದರಿಕೆಯಾಗಿದೆ. ಇದು ಮಾನವೀಯತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಭಯೋತ್ಪಾದನೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.
ಈ ಪ್ರತಿಷ್ಠಿತ ಸದನದ ಮುಂದೆ ನಿಲ್ಲುವುದು ನನಗೆ ಸಿಕ್ಕ ಸೌಭಾಗ್ಯ, ಗೌರವ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮತ್ತು ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯನ್ನು ಕೂಡ ಭಾರತ ಖಂಡಿಸುತ್ತದೆ. ಹಮಾಸ್ ನಡೆಸಿದ ಬರ್ಬರ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪ್ರತಿಯೊಬ್ಬರಿಗೂ ಭಾರತೀಯರ ಪರವಾಗಿ ನಾನು ಸಂತಾಪವನ್ನು ಸೂಚಿಸುತ್ತೇನೆ. ನಿಮ್ಮ ನೋವು, ನಿಮ್ಮ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ. ಭಾರತವು ಸದಾ ಇಸ್ರೇಲ್‌ನೊಂದಿಗೆ ದೃಢವಾಗಿ ನಿಲ್ಲುತ್ತದೆ. ಭಾರತವು ಇಸ್ರೇಲ್ ಅನ್ನು ಔಪಚಾರಿಕವಾಗಿ ಗುರುತಿಸಿದ ದಿನವಾದ 1950ರ ಸೆಪ್ಟೆಂಬರ್ 17ರಂದು ನಾನು ಜನಿಸಿದ್ದೇನೆ ಎಂದು ಪ್ರಧಾನಿ ಮೋದಿ ಇಸ್ರೇಲ್ ಸಂಸತ್ನಲ್ಲಿ ಮಾತನಾಡಿದ್ದಾರೆ.
#WATCH | Jerusalem, Israel: Addressing the Israeli Parliament, Prime Minister Narendra Modi says, “…I was born on the same day that India formally recognised Israel, September 17, 1950. I also carry with me the deepest condolences of the people of India for every life lost and… pic.twitter.com/9XJqH9GZ8m
— ANI (@ANI) February 25, 2026
ಇದನ್ನೂ ಓದಿ: ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ
2023ರ ಅಕ್ಟೋಬರ್ 7ರಂದು ನಡೆದ ಹಮಾಸ್ ದಾಳಿಗೆ ಸಂತಾಪ ಸೂಚಿಸಿ, ಭಾರತವು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಜೊತೆ ನಿಲ್ಲುತ್ತದೆ ಎಂದು ಮೋದಿ ದೃಢಪಡಿಸಿದ್ದಾರೆ. ಭಾರತವು ಗಾಜಾ ಶಾಂತಿ ಉಪಕ್ರಮವನ್ನು ಬೆಂಬಲಿಸುತ್ತದೆ. ಇದು ಈ ಪ್ರದೇಶದಲ್ಲಿ ನ್ಯಾಯಯುತ ಮತ್ತು ಶಾಶ್ವತ ಶಾಂತಿಯ ಭರವಸೆಯನ್ನು ಹೊಂದಿದೆ. ಶಾಂತಿಯ ಹಾದಿ ಯಾವಾಗಲೂ ಸುಲಭವಲ್ಲ. ಈ ಪ್ರದೇಶದಲ್ಲಿ ಸಂವಾದ, ಶಾಂತಿ ಮತ್ತು ಸ್ಥಿರತೆಗಾಗಿ ಭಾರತವು ನಿಮ್ಮೊಂದಿಗೆ ಮತ್ತು ಜಗತ್ತಿನೊಂದಿಗೆ ಸದಾ ನಿಲ್ಲುತ್ತದೆ” ಎಂದು ಪ್ರಧಾನಿ ಮೋದಿ ನೆಸ್ಸೆಟ್‌ನಲ್ಲಿ ಹೇಳಿದ್ದಾರೆ.
#WATCH | Jerusalem, Israel: Addressing the Israeli Parliament, Prime Minister Narendra Modi says, “No cause can justify the murder of civilians. Nothing can justify terrorism. India has also endured the pain of terrorism for a long time. We remember the 26/11 Mumbai attacks and… https://t.co/V6i5dcBD8s pic.twitter.com/cApoO22Td7
— ANI (@ANI) February 25, 2026
ಇದನ್ನೂ ಓದಿ: ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ
ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧ ಹದಗೆಡುತ್ತಿರುವುದು ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ರಕ್ಷಣೆ ಮತ್ತು ವ್ಯಾಪಾರ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಎರಡು ದಿನಗಳ ಇಸ್ರೇಲ್ ಭೇಟಿಯನ್ನು ಪ್ರಾರಂಭಿಸಿದ್ದಾರೆ. ಪ್ರಧಾನಿ ಮೋದಿ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದಕ್ಕೂ ಮುನ್ನ ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
