ಭರ್ಜರಿ ಸೆಂಚುರಿ ಸಿಡಿಸಿದ ರುತುರಾಜ್ ಗಾಯಕ್ವಾಡ್ – Kannada News

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32 ರನ್​ಗಳ ಕೊಡುಗೆ ನೀಡಿದರು.

ಈ ಹಂತದಲ್ಲಿ ಜೊತೆಗೂಡಿದ ರುತುರಾಜ್ ಗಾಯಕ್ವಾಡ್ ಹಾಗೂ ತಿಲಕ್ ವರ್ಮಾ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು. 13ನೇ ಓವರ್​ನಲ್ಲಿ ಜೊತೆಗೂಡಿದ ಈ ಜೋಡಿಯು 42 ಓವರ್​ಗಳ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಇನ್ನು ಕೊನೆಯ 8 ಓವರ್​ಗಳಿರುವಾಗ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ರುತುರಾಜ್ ಗಾಯಕ್ವಾಡ್ 112 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿ ಬೆನ್ನಲ್ಲೇ ವನುಜಾ ಸಹನ್ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ ಔಟಾದರು.

ಔಟಾಗುವ ಮುನ್ನ 114 ಎಸೆತಗಳನ್ನು ಎದುರಿಸಿದ ರುತುರಾಜ್ ಗಾಯಕ್ವಾಡ್ 3 ಭರ್ಜರಿ ಸಿಕ್ಸರ್ ಹಾಗೂ 6 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಇನ್ನು ರುತುರಾಜ್ ನಿರ್ಗಮನದ ಬೆನ್ನಲ್ಲೇ ತಿಲಕ್ ವರ್ಮಾ (60) ಕೂಡ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಆಯುಷ್ ಬದೋನಿ 24 ರನ್ ಬಾರಿಸಿದರೆ, ಸೂರ್ಯವಂಶಿ ಶೆಡ್ಗೆ 26 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಭಾರತ ಎ ತಂಡ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 277 ರನ್ ಕಲೆಹಾಕಿದೆ.

ಭಾರತ ‘ಎ’ ಪ್ಲೇಯಿಂಗ್ XI: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ತಿಲಕ್ ವರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಆಯುಷ್ ಬದೋನಿ, ಅನ್ಕುಲ್ ರಾಯ್, ಸೂರ್ಯಂಶ್ ಶೆಡ್ಗೆ, ಅನ್ಶುಲ್ ಕಂಬೋಜ್, ಅರ್ಷಾದ್ ಖಾನ್, ವಿಪ್ರಾಜ್ ನಿಗಮ್.

ಇದನ್ನೂ ಓದಿ: ಅನ್​ಫಿಟ್​… ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ?

ಶ್ರೀಲಂಕಾ ‘ಎ’ ಪ್ಲೇಯಿಂಗ್ XI: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಅವಿಷ್ಕ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಸದೀರ ಸಮರವಿಕ್ರಮ, ಸಹನ್ ಅರಾಚಿಂಗೆ (ನಾಯಕ), ಚಾಮಿಕ ಕರುಣಾರತ್ನೆ, ರವಿಂದು ಫೆರ್ನಾಂಡೋ, ವನುಜಾ ಸಹನ್, ವಿಜಯಕಾಂತ್ ವಿಯಾಸ್ಕಾಂತ್, ಮೊಹಮ್ಮದ್ ಶಿರಾಜ್, ಗರುಕ ಸಂಕೇತ್.

Source link

Leave a Reply

Your email address will not be published. Required fields are marked *