ಬಾಲಿವುಡ್ ನಟ ರಣ್‌ಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಸಾಯಿ ಪಲ್ಲವಿ ಅಭಿನಯದ ಬೃಹತ್ ಬಜೆಟ್‌ನ ‘ರಾಮಾಯಣ’ ಸಿನಿಮಾದ ಬಿಡುಗಡೆ ಕುರಿತು ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ನೀಡಿರುವ ಹೇಳಿಕೆ ಇದೀಗ ಭಾರತೀಯ ಸಿನಿಮಾ ಪ್ರೇಮಿಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ರಾಮಾಯಣ’ ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿಯೇ ವಿದೇಶಗಳಲ್ಲಿ ತೆರೆಕಾಣಲಿದೆ.
ವಿದೇಶದಲ್ಲಿ ನವೆಂಬರ್ 6, ಭಾರತದಲ್ಲಿ ನವೆಂಬರ್ 8
ನಿರ್ಮಾಪಕ ನಮಿತ್ ಮಲ್ಹೋತ್ರಾ ತಿಳಿಸಿರುವ ಪ್ರಕಾರ, ‘ರಾಮಾಯಣ’ ಚಿತ್ರವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನವೆಂಬರ್ 6 ಶುಕ್ರವಾರದಂದು ಬಿಡುಗಡೆಯಾಗಲಿದೆ. ಆದರೆ ಭಾರತದಲ್ಲಿ ನವೆಂಬರ್ 8ರ ಭಾನುವಾರ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ. ವಿದೇಶಗಳಲ್ಲಿ ಶುಕ್ರವಾರ ಸಿನಿಮಾ ರಿಲೀಸ್ ಮಾಡುವ ಪದ್ಧತಿ ಇರುವುದರಿಂದ ಈ ನಿರ್ಧಾರ ತಳೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಲೀಕ್ ಭೀತಿ: ಅಪ್ಸೆಟ್ ಆದ ಭಾರತೀಯ ಅಭಿಮಾನಿಗಳು
ವಿದೇಶದಲ್ಲಿ ಎರಡು ದಿನ ಮುಂಚಿತವಾಗಿ ಸಿನಿಮಾ ರಿಲೀಸ್ ಆಗುತ್ತಿರುವುದು ಭಾರತೀಯ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಚಿತ್ರದ ದೃಶ್ಯಗಳು ಎಚ್‌ಡಿ ರೂಪದಲ್ಲಿ ಲೀಕ್ ಆಗಬಹುದು ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಸ್ಪಾಯ್ಲರ್‌ಗಳು ಹರಿದಾಡಬಹುದು ಎಂಬ ಭಯ ಫ್ಯಾನ್ಸ್‌ನಲ್ಲಿದೆ. ಈ ಕಾರಣಕ್ಕೆ ಪ್ರಪಂಚದಾದ್ಯಂತ ಒಂದೇ ದಿನ ಸಿನಿಮಾವನ್ನು ಬಿಡುಗಡೆ ಮಾಡಿ ಎಂದು ಅಭಿಮಾನಿಗಳು ನಿರ್ಮಾಪಕರಲ್ಲಿ ಮನವಿ ಮಾಡುತ್ತಿದ್ದಾರೆ.
ಇದನ್ನೂ ಓದಿ: ‘ಆಸ್ಕರ್ ಸಿಗಲೇ ಬೇಕು’: ‘ರಾಮಾಯಣ’ ಸಿನಿಮಾವನ್ನು ಕೊಂಡಾಡಿದ ಮಹಾರಾಷ್ಟ್ರ ಸಿಎಂ
ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ, ಕೇವಲ ಐದೇ ದಿನಗಳಲ್ಲಿ 100 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಜಾಗತಿಕ ಮಟ್ಟದಲ್ಲಿ ದಾಖಲೆ ಬರೆದಿದೆ. ಈ ಚಿತ್ರದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಿದ್ದಾರೆ. ರಣಬೀರ್ ರಾಮ, ಸಾಯಿ ಪಲ್ಲವಿ ಸೀತೆ ಪಾತ್ರ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
