ಟೆಹ್ರಾನ್, ಏಪ್ರಿಲ್ 18: ಇರಾನ್ ಇಂದು ಹಾರ್ಮುಜ್ ಜಲಸಂಧಿಯನ್ನು (Strait Of Hormuz) ದಾಟುತ್ತಿದ್ದ ಗುಂಡಿನ ದಾಳಿ ನಡೆಸಿದ್ದ 2 ಹಡಗುಗಳಲ್ಲಿ ಭಾರತದ 1 ಹಡಗು ಕೂಡ ಸೇರಿತ್ತು. ಈ ತೈಲ ಟ್ಯಾಂಕರ್ ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕ್ ತೈಲವನ್ನು ಸಾಗಿಸುತ್ತಿತ್ತು. ಇದರ ಮೇಲೆ ಓಮನ್‌ನ ಉತ್ತರಕ್ಕೆ ಇರಾನ್ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಿಂದ 2 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಯು-ಟರ್ನ್ ತೆಗೆದುಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಭಾರತ ಇರಾನ್ಗೆ ಸಮನ್ಸ್ ಜಾರಿ ಮಾಡಿದೆ.
ಜಗ್ ಅರ್ನವ್ ಮತ್ತು ಸನ್ಮಾರ್ ಹೆರಾಲ್ಡ್ ಎಂಬ ಭಾರತದ 2 ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಹೋಗುತ್ತಿದ್ದಾಗ ದಾಳಿ ನಡೆಸಲಾಗಿತ್ತು. ಅವುಗಳಲ್ಲಿ ಜಗ್ ಅರ್ನವ್ ಮೇಲೆ ದಾಳಿ ನಡೆಸಲಾಯಿತು. ಇದು ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ಹತ್ತಿರದಲ್ಲಿದ್ದ ಇನ್ನೊಂದು ಹಡಗು ಸನ್ಮಾರ್ ಹೆರಾಲ್ಡ್ ಹಾನಿಗೊಳಗಾಗಿಲ್ಲ. ಜಗ್ ಅರ್ನವ್ಗೆ ಸಣ್ಣಪುಟ್ಟ ಹಾನಿಯಾಗಿದೆ. ಆದರೆ, ಸಿಬ್ಬಂದಿ ಸುರಕ್ಷಿತರಾಗಿದ್ದಾರೆ.
ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ನಿಂದ ಗುಂಡಿನ ದಾಳಿ
ಹಾರ್ಮುಜ್‌ನಲ್ಲಿರುವ ಭಾರತೀಯ ಹಡಗುಗಳ ಬಳಿ ಗುಂಡಿನ ದಾಳಿ ನಡೆದ ನಂತರ ಭಾರತವು ಇರಾನಿನ ರಾಯಭಾರಿಯನ್ನು ಕರೆಸಿ ಸಮನ್ಸ್ ನೀಡಿದೆ. ಭಾರತದ ವಿದೇಶಾಂಗ ಸಚಿವಾಲಯ ಇರಾನಿನ ರಾಯಭಾರಿ ಡಾ. ಮೊಹಮ್ಮದ್ ಫಥಾಲಿಯವರನ್ನು ಕರೆಸಿ ಈ ವಿಷಯದ ಬಗ್ಗೆ ಔಪಚಾರಿಕವಾಗಿ ನೋಟಿಸ್ ನೀಡಿದೆ.
#WATCH | Delhi: Ambassador of Iran to India, Dr. Mohammad Fathali leaves from the Ministry of External Affairs (MEA). More details awaited. pic.twitter.com/HkrEkJKhq1
— ANI (@ANI) April 18, 2026
ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು ಕೊನೆಗೊಳಿಸುವುದಿಲ್ಲ ಎಂದು ಅಮೆರಿಕ ಹೇಳಿದ ನಂತರ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯ ಮೇಲೆ ನಿರ್ಬಂಧ ಹೇರಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನ ಜಾರಿಯಲ್ಲಿರುವವರೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಾಗಾಟವನ್ನು ನಿರ್ಬಂಧಿಸುವುದಾಗಿ ಇರಾನ್ ಎಚ್ಚರಿಸಿದೆ.
ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ಉಗ್ರಗಾಮಿ ಗುಂಪಿನ ನಡುವೆ ಲೆಬನಾನ್‌ನಲ್ಲಿ 10 ದಿನಗಳ ಕದನ ವಿರಾಮದ ನಂತರ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ಸಂಪೂರ್ಣವಾಗಿ ತೆರೆಯಲಾಗಿದೆ ಎಂದು ಇರಾನ್ ನಿನ್ನೆ ಹೇಳಿತ್ತು. ಆದರೂ ಇರಾನ್ನ ಹಡಗುಗಳ ಮೇಲಿನ ದಿಗ್ಬಂಧನ ಮುಂದುವರಿಯುತ್ತದೆ ಎಂದು ಟ್ರಂಪ್ ಪುನರುಚ್ಚರಿಸಿದ ನಂತರ ಇರಾನ್ ಅಧಿಕಾರಿಗಳು ಈ ಕ್ರಮವು ಕಳೆದ ವಾರದ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
