ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ – Kannada News | Karnataka Govt Issues Official Order to Setup 10,000 ‘Bharat Jodo Youth Bharat Jodo Yuva Sanghas’ with Rs 1,010 Crore Budget

ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಪರಮೇಶ್ವರ್​Image Credit source: G. Parameshwar X Account

ಬೆಂಗಳೂರು, ಜುಲೈ 13: ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆ ಸಂಬಂಧ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಮಾಡಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದೇವೆ ಎಂದವರು ತಿಳಿಸಿದ್ದಾರೆ.

ಪ್ರತಿ ಸಂಘಕ್ಕೆ ವಾರ್ಷಿಕ ತಲಾ 10 ಲಕ್ಷ ಅನುದಾನ

ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ಪ್ರತಿಯೊಂದು ಸಂಘದ ಒಬ್ಬ ತರಬೇತುದಾರರಿಗೆ ವಾರ್ಷಿಕ ತಲಾ ₹24,000 ಗೌರವಧನದ ಜೊತೆಗೆ ಪ್ರತಿ ಸಂಘಕ್ಕೆ ವಾರ್ಷಿಕ ತಲಾ ₹10 ಲಕ್ಷ ಅನುದಾನ ನೀಡಲಾಗುವುದು. ಭಾರತ್‌ ಜೋಡೋ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ, ನಾಡಿನ ಸತ್ಪ್ರಜೆಗಳಾಗಿ ರೂಪಿಸುವುದು ನಮ್ಮ ಉದ್ದೇಶ ಎಂದು ಡಿಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ‘ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?’; ಸರ್ಕಾರದ ವಿಳಂಬ ನೀತಿ ವಿರುದ್ಧ ಜೆಡಿಎಸ್ ಕೆಂಡಾಮಂಡಲ!

ಸರ್ಕಾರದ ಆದೇಶದಲ್ಲಿ ಏನಿದೆ?

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 6,000, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸರಾಸರಿ 4000 ಸೇರಿ ಒಟ್ಟು 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುವುದು. 1010 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *