ಭಾರತ-ಪಾಕಿಸ್ತಾನ ಯುದ್ಧ ನಾನು ನಿಲ್ಲಿಸದಿದ್ದರೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಾಯ್ತಿದ್ರು ಎಂದ ಟ್ರಂಪ್ – Kannada News | Did Trump Credit US for Saving Pakistan PM, Social Media Reacts

ವಾಷಿಂಗ್ಟನ್, ಫೆಬ್ರವರಿ 25: ನಾನು ಮಧ್ಯಪ್ರವೇಶಿಸಿ ಭಾರತ-ಪಾಕಿಸ್ತಾನ ಯುದ್ಧವನ್ನು ತಡೆಯದಿದ್ದರೆ ಅಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್​​ ಸಾಯುತ್ತಿದ್ದರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಹೇಳಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದ ಸಮಯದಲ್ಲಿ ಈ ವಿಷಯದ ಕುರಿತು ಮಾತನಾಡಿದ್ದಾರೆ. ಎರಡೂ ದೇಶಗಳ ಸ್ಥಿತಿ ಎಷ್ಟು ಹದಗೆಟ್ಟಿತ್ತೆಂದರೆ ಅದು ಪರಮಾಣು ಯುದ್ಧಕ್ಕೆ ಕಾರಣವಾಗುತ್ತಿತ್ತು.

ಇದರಿಂದ ಸುಮಾರು 35 ಮಿಲಿಯನ್ ಜನರು ಪ್ರಾಣ ಕಳೆದುಕೊಳ್ಳಬಹುದಿತ್ತು ಮತ್ತು ಪಾಕಿಸ್ತಾನದ ಪ್ರಧಾನಿ ಕೂಡ ಬದುಕುಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಟ್ರಂಪ್ ತಮ್ಮನ್ನು ಹೀರೋ ಎಂದು ಬಿಂಬಿಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ.

ಕಳೆದ ಕೆಲವು ತಿಂಗಳುಗಳಿಂದ ತಮ್ಮ ಆಡಳಿತವು ಎರಡು ದೇಶಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಲು ವ್ಯಾಪಾರ ಒಪ್ಪಂದಗಳು ಸುಂಕದ ಒತ್ತಡವ್ನು ಬಳಸಿಕೊಂಡಿದ್ದಾರೆ. ಆದರೂ ಭಾರತ-ಪಾಕ್ ನಡುವೆ ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ನಡೆದಿಲ್ಲ ಎಂದು ಭಾರತ ಈ ಹಿಂದೆ ಸ್ಪಷ್ಟಪಡಿಸಿದೆ.
ಮೇ 2025ರಲ್ಲಿ 26 ಜನರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಪ್ರತಿದಾಳಿ ನಡೆಸಿತು.

ಮತ್ತಷ್ಟು ಓದಿ: ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್

ಆಪರೇಷನ್ ಸಿಂಧೂರ್ ಅಡಿಯಲ್ಲಿ, ಭಾರತ ನಿಯಂತ್ರಣ ರೇಖೆಯಾದ್ಯಂತ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿತ್ತು. ನಂತರ ಪಾಕಿಸ್ತಾನ ಡ್ರೋನ್ ಮತ್ತು ಯುಸಿಎವಿ ದಾಳಿಗಳನ್ನು ಪ್ರಯತ್ನಿಸಿತು. ಆದರೆ ಅದನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆಗಳು ವಿಫಲಗೊಳಿಸಿದವು. ಸೇನೆ, ವಾಯುಪಡೆ ಮತ್ತು ನೌಕಾಪಡೆ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿ, ಪಾಕಿಸ್ತಾನವನ್ನು ತೀವ್ರವಾಗಿ ಸೋಲಿಸಿದವು.ಇದರ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಯಿತು ಮತ್ತು ಜಾಗತಿಕ ಕಳವಳ ಕೂಡ ಉಂಟಾಯಿತು.

ಭಾರತದ ನಿಲುವೇನು?
ಭಾರತ-ಪಾಕಿಸ್ತಾನ ಸಂಘರ್ಷವನ್ನು ನಿಲ್ಲಿಸುವಲ್ಲಿ ಯಾವುದೇ ಮೂರನೇ ರಾಷ್ಟ್ರದ ಪಾತ್ರವಿಲ್ಲ ಎಂದು ಭಾರತ ನಿರಂತರವಾಗಿ ಸಮರ್ಥಿಸಿಕೊಂಡಿದೆ. ಭಾರತದ ಪ್ರಕಾರ, ಅಮೆರಿಕದ ಒತ್ತಡದಿಂದಾಗಿ ಅಲ್ಲ, ಎರಡೂ ದೇಶಗಳ ನಡುವಿನ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಮಟ್ಟದಲ್ಲಿ ನಡೆದ ಮಾತುಕತೆ ನಂತರ ಮಿಲಿಟರಿ ಕ್ರಮವನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳು ದ್ವಿಪಕ್ಷೀಯ ಮತ್ತು ಯಾವುದೇ ಹೊರಗಿನ ಮಧ್ಯಸ್ಥಿಕೆಯನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ತಮ್ಮ ಭಾಷಣದಲ್ಲಿ ಟ್ರಂಪ್ ತಮ್ಮ ಆಡಳಿತವು ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಇರಾನ್ ಬಗ್ಗೆ ಹೇಳುವುದಾದರೆ ಅವರು ರಾಜತಾಂತ್ರಿಕಪರಿಹಾರವನ್ನು ಬಯಸುತ್ತಾರೆ, ಆದರೆ ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *