Headlines

ಭಾರತ vs ಇಂಗ್ಲೆಂಡ್ 4ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | India vs England 4th T20I Date, When And Where?

ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೂರು ಮ್ಯಾಚ್​ಗಳು ಮುಗಿದಿದೆ. ಈ ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾದರೆ, ದ್ವಿತೀಯ ಮತ್ತು ತೃತೀಯ ಪಂದ್ಯಗಳನ್ನು ಇಂಗ್ಲೆಂಡ್ ತಂಡ ಗೆದ್ದುಕೊಂಡಿದೆ. ಈ ಗೆಲುವುಗಳೊಂದಿಗೆ ಆಂಗ್ಲರ ಪಡೆ 5 ಮ್ಯಾಚ್​ಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇತ್ತ ಈ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ಮುಂದಿನ ಎರಡು ಪಂದ್ಯಗಳಲ್ಲೂ ಜಯ ಸಾಧಿಸಲೇಬೇಕು.

ಅದರಲ್ಲೂ ಟೀಮ್ ಇಂಡಿಯಾ ಪಾಲಿಗೆ ನಾಲ್ಕನೇ ಮ್ಯಾಚ್ ನಿರ್ನಾಯಕ. ಜುಲೈ 9 ರಂದು ನಡೆಯಲಿರುವ ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಭಾರತ ಮತ್ತು ಇಂಗ್ಲೆಂಡ್​ ನಡುವಣ 4ನೇ ಟಿ20 ಪಂದ್ಯ ಗುರುವಾರ (ಜು.9) ನಡೆಯಲಿದೆ.
  • ಬ್ರಿಸ್ಟಲ್​ನ ಸೀಟ್ ಯುನಿಕ್ ಸ್ಟೇಡಿಯಂ ನಲ್ಲಿ ಈ ಮ್ಯಾಚ್ ಜರುಗಲಿದೆ.
  • ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10:00 ಗಂಟೆಗೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

  • ನೇರ ಪ್ರಸಾರ (ಟಿವಿ): ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ.
  • ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್.

ಬ್ರಿಸ್ಟಲ್​ ಪಿಚ್ ರಿಪೋರ್ಟ್:

ಬ್ರಿಸ್ಟಲ್‌ನ ಸೀಟ್ ಯುನಿಕ್ ಸ್ಟೇಡಿಯಂ ಪಿಚ್ ಪ್ರಮುಖವಾಗಿ ಬ್ಯಾಟಿಂಗ್‌ಗೆ ಸಹಕಾರಿ. ಈ ಮೈದಾನದ ಪಿಚ್ ಸಾಮಾನ್ಯವಾಗಿ ಫ್ಲಾಟ್ ಆಗಿರುತ್ತದೆ. ಅಂದರೆ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟರ್‌ಗಳು ಸುಲಭವಾಗಿ ದೊಡ್ಡ ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸಬಹುದು.

ಹಾಗೆಯೇ ಪಂದ್ಯದ ಆರಂಭಿಕ ಓವರ್‌ಗಳಲ್ಲಿ ಹೊಸ ಚೆಂಡಿನಲ್ಲಿ ವೇಗದ ಬೌಲರ್‌ಗಳಿಗೆ ಉತ್ತಮ ಬೌನ್ಸ್ ಮತ್ತು ಸ್ವಿಂಗ್ ಸಿಗುವ ಸಾಧ್ಯತೆ ಇರುತ್ತದೆ.

ಇನ್ನು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಇಲ್ಲಿನ ಸಣ್ಣ ಬೌಂಡರಿಗಳು ಮತ್ತು ಫ್ಲಾಟ್ ಪಿಚ್‌ನಿಂದಾಗಿ ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಸಾಕಷ್ಟು ಕಷ್ಟಪಡಬೇಕಾಗುತ್ತದೆ. ಹೀಗಾಗಿ ನಾಲ್ಕನೇ ಮ್ಯಾಚ್​ನಲ್ಲೂ ರನ್​ ಮಳೆಯನ್ನು ನಿರೀಕ್ಷಿಸಬಹುದು.

ಉಭಯ ತಂಡಗಳು:

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: ಅರ್ಜೆಂಟೀನಾ ಪರ ‘ಆಡುತ್ತಿರುವ’ ರೆಫರಿ… ಗಂಭೀರ ಆರೋಪ!

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Source link

Leave a Reply

Your email address will not be published. Required fields are marked *