Headlines

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ – Kannada News | Metal sheets from nearby structures fall on Namma Metro tracks, disrupt train services amid gusty winds And rains

ಬೆಂಗಳೂರು, (ಮೇ 21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು  ಸುರಿದ ಮಳೆಯು (Bengaluru rainss) ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ದೈನಂದಿನ ಸಂಚಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹೌದು… ಇಂದು (ಮೇ 21) ಸಂಜೆ ಭಾರೀ ಗಾಳಿ ಮಳೆಯಿಂದಾಗಿ ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಗಿದೆ.  ಇದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದು. ಈ ಬಗ್ಗೆ ಬಿಎಂಆರ್​​​​ಸಿಎಲ್  (BMRCL) ವಿಶೇಷ ಮನವಿ ಮಾಡಿಕೊಂಡಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಭಾರಿ ಗಾಳಿ ಮಳೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
  • ಇಂದು ಸಂಜೆ ಸುರಿದ ಮಳೆಗೆ ಎಲ್ಲಾ ಮೆಟ್ರೋ ಮಾರ್ಗಗಳ ರೈಲು ಸಂಚಾರದಲ್ಲಿ ವ್ಯತ್ಯಯ
  • ಅನಾನುಕೂಲತೆಗೆ ವಿಷಾದಿಸ್ತೇವೆ ಎಂದ ಬಿಎಂಆರ್​ಸಿಎಲ್

ಬಿಎಂಆರ್​​ಸಿಎಲ್ ಮಾಧ್ಯಮ ಪ್ರಕಟಣೆ

ಘಟನೆಗೆ ಸಂಬಂಧಿಸಿದಂತೆ ತುರ್ತು ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್‌, ಭಾರೀ ಗಾಳಿ ಹಾಗೂ ಮಳೆಯಿಂದಾಗಿ ಎಲ್ಲಾ ಮೆಟ್ರೋ ಮಾರ್ಗಗಳ ಸೇವೆಯಲ್ಲಿ ವಿಳಂಬ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಈ ಅನಾನುಕೂಲತೆಗೆ ವಿಷಾಧಿಸುತ್ತೇವೆ. ಸುರಕ್ಷಿತವಾಗಿ ರೈಲುಗಳನ್ನು ಕಾರ್ಯಾಚರಣೆ ಮಾಡಬೇಕಿರುವುದರಿಂದ ವೇಳಾಪಟ್ಟಿಯಲ್ಲಿ ಕೊಂಚ ಏರುಪೇರಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕರು ಮತ್ತು ಪ್ರಯಾಣಿಕರು ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಕೋರಿದೆ.

ಮೇ 24ರಂದು 1 ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ

ಇನ್ನು ಇದೇ ಮೇ 24ರಂದು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿಯೇ ನಮ್ಮ ಮೆಟ್ರೋ ಸೇವೆ ಇರಲಿದೆ. ಭಾನುವಾರ ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಅನುಕೂಲಕ್ಕಾಗಿ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ. ಬೆಳ್ಳಿಗ್ಗೆ 7 ಗಂಟೆ ಬದಲಾಗಿ 6 ಗಂಟೆಯಿಂದಲೇ ಮೆಟ್ರೋ ಕಾರ್ಯಾಚರಣೆ ಪ್ರಾರಂಭವಾಗಿದೆ.

ನೇರಳೆ ಮಾರ್ಗದ ವೈಟ್ ಫೀಲ್ಡ್ ಟು ಚೆಲ್ಲಘಟ್ಟ, ಹಸಿರು‌ ಮಾರ್ಗದ ಮಾದವಾರ ಟು ಚೆಲ್ಲಘಟ್ಟ, ಹಳದಿ‌ ಮಾರ್ಗದ ಆರ್ ವಿ ರೋಡ್ ಟು ಬೊಮ್ಮಸಂದ್ರ ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಭಾನುವಾರ ಆರು ಗಂಟೆಯಿಂದಲೇ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *