ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ – Kannada News | Tamil Nadu CM Vijay meets DMK President MK Stalin at their residence

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸಿಎಂ ವಿಜಯ್ ಅವರನ್ನು ಆತ್ಮೀಯವಾಗಿ ಮನೆಗೆ ಸ್ವಾಗತಿಸಿದರು. ಹಸ್ತಲಾಘವ ನೀಡುವ ಮೂಲಕ ವಿಜಯ್ ಅವರಿಗೆ ಸ್ವಾಗತ ನೀಡಿದ ಸ್ಟಾಲಿನ್ ಬಳಿಕ ಹೂಗುಚ್ಛ ನೀಡಿ, ರೇಷ್ಮೆ ಶಾಲು ಹೊದಿಸಿದರು.

ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಡಿಎಂಕೆ ತೀವ್ರ ಚುನಾವಣಾ ಸ್ಪರ್ಧೆಯಲ್ಲಿ ತೊಡಗಿತ್ತು. ವಿಜಯ್ ಕೂಡ ಡಿಎಂಕೆ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದ್ದರು. ನಿನ್ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗಲೂ ಸಿಎಂ ವಿಜಯ್ ಡಿಎಂಕೆ ಸರ್ಕಾರ ಭಾರೀ ಸಾಲ ಮಾಡಿ ಹೋಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಸ್ಟಾಲಿನ್ ಕೂಡ ತಿರುಗೇಟು ನೀಡಿದ್ದರು. ಅದರ ಬೆನ್ನಲ್ಲೇ ಇಬ್ಬರೂ ನಾಯಕರು ಮುಖಾಮುಖಿ ಭೇಟಿಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *