ಮಂಗಳೂರು, ಜುಲೈ 23: ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಕಮಾಂಡೋಗಳು ಮಂಗಳೂರಿನಲ್ಲಿ ಬೃಹತ್ ಅಣಕು ಕಾರ್ಯಾಚರಣೆಯನ್ನು ನಡೆಸಿವೆ. ಭಯೋತ್ಪಾದಕ ದಾಳಿಗಳನ್ನು ಎದುರಿಸಲು ಮತ್ತು ಸಂಕಷ್ಟದ ಸಂದರ್ಭಗಳನ್ನು ನಿರ್ವಹಿಸಲು ಕೈಗೊಳ್ಳುವ ಕ್ರಮಗಳನ್ನು ಈ ಮಾಕ್ಡ್ರಿಲ್ನಲ್ಲಿ ಪ್ರದರ್ಶಿಸಲಾಗಿದೆ. ಕಡಿಮೆ ಎತ್ತರದಲ್ಲಿ ಹಾರುತ್ತಿದ್ದ ಸೇನಾ ಹೆಲಿಕಾಪ್ಟರ್‌ಗಳನ್ನು ನೋಡಿ ಸ್ಥಳೀಯ ನಿವಾಸಿಗಳಲ್ಲಿ ಕೆಲ ಕಾಲ ಆತಂಕ ಮನೆ ಮಾಡಿತ್ತು. ಆದರೆ ಇದು ಕೇವಲ ತಾಲೀಮು ಎಂದು ತಿಳಿದ ನಂತರ ಸಾರ್ವಜನಿಕರು ನಿರಾಳರಾದರು. ಎನ್ಎಂಪಿಎ, ಇನ್ಫೋಸಿಸ್ ಮತ್ತು ಕೆಲವು ಶಿಕ್ಷಣ ಸಂಸ್ಥೆಗಳ ಬಳಿ ಈ ಡ್ರಿಲ್ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
