ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಪ್ರಯಾಣಿಕರ ಗಮನಕ್ಕೆ: ಈ ರೈಲ್ವೆ ಮಾರ್ಗಕ್ಕೆ ಜೂ.15 ರಿಂದ ಹೊಸ ಮುಂಗಾರು ವೇಳಾಪಟ್ಟಿ – Kannada News

ಮಂಗಳೂರು, ಜೂ.4 : ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ (Monsoon) ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು (Monsoon Time Table) ಪ್ರಕಟಿಸಲಾಗಿದೆ. ಈ ಹೊಸ ವೇಳಾಪಟ್ಟಿಯು ಜೂನ್ 15, 2026 ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರಲಿದೆ.

ಪಶ್ಚಿಮ ಕರಾವಳಿ ಮತ್ತು ಕೊಂಕಣ ಭಾಗದಲ್ಲಿ ಮುಂಗಾರು ಮಳೆಯು ಅತ್ಯಂತ ಭೀಕರವಾಗಿರುತ್ತದೆ. ಈ ಅವಧಿಯಲ್ಲಿ ಗುಡ್ಡ ಕುಸಿತ, ಹಳಿಗಳ ಮೇಲೆ ನೀರು ನಿಲ್ಲುವುದು ಮತ್ತು ಮರಗಳು ಉರುಳುವಂತಹ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ಹೀಗಾಗಿ, ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡಲು ರೈಲುಗಳ ವೇಗವನ್ನು ನಿಯಂತ್ರಿಸಲಾಗುತ್ತದೆ. ಇದರ ಪರಿಣಾಮವಾಗಿ ರೈಲುಗಳ ಸಂಚಾರದ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು

ಇಲ್ಲಿದೆ ನೋಡಿ ಪೋಸ್ಟ್​​:

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಮಾರ್ಗವಾಗಿ ಸಂಚರಿಸುವ ಸಾವಿರಾರು ಪ್ರಯಾಣಿಕರ ಮೇಲೆ ಈ ವೇಳಾಪಟ್ಟಿ ಪ್ರಭಾವ ಬೀರಲಿದೆ. ಆದ್ದರಿಂದ ಜೂನ್ 15 ರ ನಂತರ ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಿರುವ ಅಥವಾ ಪ್ರಯಾಣ ಯೋಜಿಸುತ್ತಿರುವ ನಾಗರಿಕರು, ರೈಲು ನಿಲ್ದಾಣಕ್ಕೆ ಹೊರಡುವ ಮುನ್ನ ತಮ್ಮ ರೈಲಿನ ನವೀಕೃತ ಸಮಯವನ್ನು ಅಧಿಕೃತ ವೆಬ್‌ಸೈಟ್ ಅಥವಾ ಹೆಲ್ಪ್‌ಲೈನ್ ಮೂಲಕ ಪರಿಶೀಲಿಸಿಕೊಳ್ಳುವಂತೆ ಕೊಂಕಣ ರೈಲ್ವೆ ಇಲಾಖೆ ವಿನಂತಿಸಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *