ಮಂಡ್ಯ, ಜೂನ್ 14: ಮಂಡ್ಯದ ಜೆಡಿಎಸ್-ಬಿಜೆಪಿ ನಾಯಕರು ಮುನಿಸು ಮರೆತು ಪ್ರಧಾನಿ ನರೇಂದ್ರ ಮೋದಿ 12 ವರ್ಷ ಸುಧೀರ್ಘ ಆಡಳಿತ ಸ್ಮರಣೆ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮಂಡ್ಯದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಉಭಯ ಪಕ್ಷಗಳ ಮುಖಂಡರು ವೇದಿಕೆ ಹಂಚಿಕೊಂಡಿರೋದು ಕಂಡುಬಂದಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರ ಸಂಬಂಧ ಬಿಜೆಪಿ – ಜೆಡಿಎಸ್ ಮುಖಂಡರು ಇತ್ತೀಚೆಗಷ್ಟೇ ಪರಸ್ಪರ ವಾಗ್ದಾಳಿ ನಡೆಸಿದ್ದರು. ಮೈತ್ರಿಯೇ ಬೇಡ ಎಂದು ಬಿಜೆಪಿ ನಾಯಕರಿಗೂ ದೂರು ನೀಡಲಾಗಿತ್ತು. ಹೀಗಿದ್ದರೂ ಅವೆಲ್ಲವನ್ನು ಮರೆತು ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತ ಕುಮಾರಸ್ವಾಮಿ ಮತ್ತು ನಾರಾಯಣಗೌಡ ಖುಷಿಯಿಂದಲೇ ಮಾತುಕತೆ ನಡೆಸಿರೋದು ಕಂಡುಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.