ಮಂಡ್ಯ, ಜುಲೈ 28: ಕೆ.ಆರ್.ಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ ‘ಸಂಘಟನಾ ಸೃಜನ ಅಭಿಯಾನ’ ಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ತಾಲೂಕಿನಲ್ಲಿ ಸ್ಪಂದಿಸುವ ನಾಯಕರೇ ಇಲ್ಲ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಜೆಡಿಎಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು ನಾಯಕರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.
ಎಐಸಿಸಿ ವೀಕ್ಷಕ ಸೈಮನ್ ಅಲೆಕ್ಸ್ ಹಾಗೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸಮ್ಮುಖದಲ್ಲೇ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವಂತೆ ಪಟ್ಟು ಹಿಡಿದರು. ಹೊಸ ಅಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹಿಸಲು ಬಂದಿರುವುದಾಗಿ ನಾಯಕರು ಸಮಜಾಯಿಷಿ ನೀಡಿದರೂ ತಣ್ಣಗಾಗದ ಕಾರ್ಯಕರ್ತರ ಕೋಪದಿಂದಾಗಿ ಇಡೀ ಸಭೆಯು ಗಲಾಟೆ ಮತ್ತು ವಾಗ್ವಾದದಲ್ಲೇ ಅಂತ್ಯಗೊಂಡಿತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
