ಮಂಡ್ಯ, ಆಗಸ್ಟ್ 10: ಮಂಡ್ಯದ ಬಸ್ ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪ್ರಯಾಣಿಸುತ್ತಿದ್ದಾರೆಂಬ ಶಂಕೆ ಮೇಲೆ ಹಿಂದೂ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ತಡೆದು ಪರಿಶೀಲನೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ನಲ್ಲಿ ಸುಮಾರು 30 ಜನರು ಬಾಂಗ್ಲಾ ಮೂಲದವರೆಂದು ಶಂಕಿಸಿ ಕಾರ್ಯಕರ್ತರು ಅಡ್ಡಗಟ್ಟಿದ್ದರಿಂದ ಸ್ಥಳಕ್ಕೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ತಪಾಸಣೆ ವೇಳೆ ಇವರು ಕೊಡಗಿನ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರು ಎಂಬುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸದ್ಯ ಪೊಲೀಸರು ಎಲ್ಲರನ್ನು ನಿರಾಶ್ರಿತ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆ ಮೂಲಕ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಲು ಮುಂದಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.