ಮಂಡ್ಯ, (ಮೇ 03): ಮಂಡ್ಯ ವಿಶ್ವವಿದ್ಯಾಯಲಯ (Mandya University) ಮುಚ್ಚುಲು ಮುಂದಾಗಿರುವ ತಮ್ಮದೇ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ. ಸಚಿವನ್ನು ಮಂಡ್ಯ ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ವಿವಿ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರವಿ ಗಣಿಗ, ನಾನು ಶಾಸಕನಾಗಿ ಇರ್ತೀನೋ ಇಲ್ಲವೋ. ಆದ್ರೆ ಮಂಡ್ಯ ವಿವಿ ಮುಚ್ಚಲು ಬಿಡಲ್ಲ. ನಾವು ಮೈಸೂರಿನ ಗುಲಾಮರಾಗಿ ಇರುವುದು ಬೇಡ. ನಮಗೆ ಸ್ವಂತ ವಿವಿ ಬೇಕು,ಇದು ಮಂಡ್ಯದ ಸ್ವಾಭಿಮಾನ ಎಂದು ಗುಡುಗಿದರು
ಕೆಲ ದಿನಗಳ ಹಿಂದೆ ಮಂಡ್ಯ ಸೇರಿದಂತೆ ರಾಜ್ಯದ ಹೊಸ ವಿವಿಗಳನ್ನ ಮುಚ್ಚುವ ಬಗ್ಗೆ ಉನ್ನತ್ತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಪ್ರಸ್ತಾಪ ಮಾಡಿದ್ದರು. . ಆದರೆ ಮಂಡ್ಯಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ ಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆದಿತ್ತು. ಅದಾದ ಬಳಿಕ ಕಳೆದ ಸರ್ಕಾರದ ಅವಧಿಯಲ್ಲಿ ಮಂಡ್ಯ ವಿವಿ ಘೋಷಣೆಯಾಗಿತ್ತು. ಆದ್ರೆ ಹಣಕಾಸ ವಿಚಾರದಿಂದ ಮಂಡ್ಯ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದಿಡಲಾಗಿತ್ತು. ಇದಕ್ಕೆ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಇದೀಗ ಸ್ವಪಕ್ಷದ ಶಾಸಕ ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
