ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಇಂದು (ಏಪ್ರಿಲ್ 12) ಮಧ್ಯಾಹ್ನ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳಿದ್ದಾರೆ. ಎಲ್ಲಾ ಶಾಸಕರು ಎರಡು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ.

ಇನ್ನು ಶಾಸಕರ ನಡೆ ಬಗ್ಗೆ ಇತ್ತ ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದೆಹಲಿಗೆ ಹೋದ್ರೆ ತಪ್ಪೇನು, ಬೇಡ ಅಂದೋರು ಯಾರು? ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಮಾಡಬೇಕಿತ್ತು. ಪಂಚ ರಾಜ್ಯಗಳ ಚುನಾವಣೆ, ಬೈಎಲೆಕ್ಷನ್‌ನಿಂದ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸಿದ್ದರಾಮಯ್ಯನವರು ಪರೋಕ್ಷವಾಗಿ ಶಾಸಕರ ದೆಹಲಿ ಯಾತ್ರೆಗೆ ಬೆಂಬಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *