ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಯಾದಗಿರಿ, ಮಾರ್ಚ್​​ 29: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್​​​(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಒಟ್ಟಾಗಿ ಈಜಲು ಹೋಗಿದ್ದರು ಎನ್ನಲಾಗಿದೆ.

ಈಜಲು ಹೋಗಿ 4 ಮಕ್ಕಳು ಜಲಸಮಾಧಿ ವಿಷಯ ತಿಳಿದು ಪೋಷಕರು ಮತ್ತು ಸಂಬಂಧಿಕರಿಗೆ ತೀವ್ರ ಆಘಾತವಾಗಿದೆ. ಮೃತ ಮಕ್ಕಳೆಲ್ಲರೂ ತೀರಾ ಚಿಕ್ಕ ವಯಸ್ಸಿನವರಾಗಿದ್ದು, ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ಉತ್ತಮ ಭವಿಷ್ಯದ ಕನಸು ಕಂಡು, ನೂರಾರು ಆಸೆ,ಆಕಾಂಕ್ಷೆಗಳನ್ನು ಇಟ್ಟುಕೊಂಡಿದ್ದ ಹೆತ್ತವರೀಗ ಅಕ್ಷರಶಃ ಕಂಗಾಲಾಗಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Source link

Leave a Reply

Your email address will not be published. Required fields are marked *