ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು, ಏಪ್ರಿಲ್​ 10: ಒಂದನೇ ತರಗತಿ ದಾಖಲಾತಿಗೆ (Class 1st admission) ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಇಲಾಖೆ ವಿನಾಯಿತಿ ನೀಡಿತ್ತು. ಆ ಬಳಿಕವೂ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು, ಪ್ರತಿಭಟನೆ ಕೂಡ ಮಾಡಿದ್ದರು. ಇದೀಗ 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್‌ 1 ರಿಂದ ಗರಿಷ್ಠ60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಶಿಕ್ಷಣ ಇಲಾಖೆ ಟ್ವಿಟ್​

ಇದರಿಂದ ಮಗುವಿನ ಜನ್ಮದಿನವು ಜೂನ್ 1ರಿಂದ ಮುಂದಿನ 60 ದಿನಗಳ ಒಳಗಿದ್ದರೆ (ಜುಲೈ 30ರ ವರೆಗೆ), ಅಂತಹ ಮಕ್ಕಳನ್ನು 1ನೇ ತರಗತಿಗೆ ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪೋಷಕರು ಸಲ್ಲಿಸಿದ ಮನವಿಗಳನ್ನು ಪುರಸ್ಕರಿಸಿ, ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ಕಲಂ 20ರ ಅಡಿಯಲ್ಲಿ ಈ ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: 1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಣೆ ಮಾಡಿದ್ದರು. ಅದರಂತೆ ಇದೀಗ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. 60 ದಿನಗಳ ವಿನಾಯಿತಿ ನೀಡಲಾಗಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡ ಮಕ್ಕಳಿಗೂ 1ನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *