ಭಾಮಾ ಹರೀಶ್ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಶನಿವಾರ (ಜೂ.27) ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದರು. ಇಂದು (ಜೂ.28) ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಭಾಮಾ ಹರೀಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಮುಖ್ಯಾಂಶಗಳು
- ನಿರ್ಮಾಪಕ ಭಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅಂತ್ಯಕ್ರಿಯೆ.
- ಕನ್ನಡ ಚಿತ್ರರಂಗದ ಹಲವರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ.
- ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದ ಉಲ್ಲಾಸ್ ಗೌಡ.
