ಮಡಿಕೇರಿ, ಆಗಸ್ಟ್ 10: ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್ ಕಸದ ರಾಶಿ ಕೆಳಭಾಗಕ್ಕೆ ಕೊಚ್ಚಿಹೋಗಿದೆ. ಬೆಟ್ಟದ ತುದಿಯಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.
ಬೆಟ್ಟದ ತಪ್ಪಲಿನಲ್ಲಿಯೇ ಪೊಲೀಸ್ ವಸತಿ ಗೃಹಗಳಿದ್ದು, ಕಸದ ರಾಶಿ ಹಾಗೂ ಮಣ್ಣು ವಸತಿ ಸಮುಚ್ಚಯದತ್ತ ಧಾವಿಸುತ್ತಿರುವುದರಿಂದ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ. ಸ್ಥಳೀಯ ನಗರಸಭೆ ಸದಸ್ಯ ಅಪ್ಪಣ್ಣ ಈ ಕುರಿತು ಮಾತನಾಡಿ, ತಕ್ಷಣವೇ ಕಸ ತೆರವುಗೊಳಿಸಿ ಸುರಕ್ಷಿತ ಕ್ರಮ ಕೈಗೊಳ್ಳದಿದ್ದರೆ ದೊಡ್ಡ ಅಪಾಯ ಸಂಭವಿಸಲಿದೆ ಎಂದು ಎಚ್ಚರಿಸಿದ್ದಾರೆ. ಘಟನೆಯ ಕುರಿತು ನಮ್ಮ ಪ್ರತಿನಿಧಿ ಗೋಪಾಲ್ ಸೋಮಯ್ಯ ಪ್ರತ್ಯಕ್ಷ ವರದಿ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ