ಉಡುಪಿ, ಜುಲೈ 10: ಮಣಿಪಾಲ ಸಮೀಪದ ಕೊಡಂಗೆಯಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದೆ. ಈ ಅಪಘಾತದಲ್ಲಿ ಎಂಟು ಮಕ್ಕಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಣಿಪಾಲದ ಕ್ರಸ್ಟ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಬಸ್ ರಸ್ತೆ ಪಕ್ಕದ ಕಂದಕಕ್ಕೆ ಮಗುಚಿಬಿದ್ದಿದೆ. ಅಪಘಾತದಲ್ಲಿ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ಮಗುವಿಗೆ ಹೆಚ್ಚಿನ ಪೆಟ್ಟಾಗಿದೆ. ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.