Headlines

ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ! – Kannada News | Karnataka Special Intensive Revision 2026: CM DK Shivakumar Launches SIR Campaign From Residence

ಬೆಂಗಳೂರು, ಜೂನ್ 30: ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಧಿಕಾರಿಗಳೊಂದಿಗೆ ಸಹಕರಿಸಿ,7 ದಿನಗಳಲ್ಲೇ ಎಲ್ಲರಿಗೂ ಫಾರ್ಮ್​ ಕೊಡುತ್ತಾರೆ. ದಯವಿಟ್ಟು ನಿಮ್ಮ ಫೋನ್ ನಂಬರ್, ಆಧಾರ್ ಕಾರ್ಡ್​ ಮಾಹಿತಿಗಾಗಿ ಕೊಡಬೇಕು. ಬೇರೆ ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುತ್ತಿದ್ದಾರೆ. ಮತದಾನ ಇಲ್ಲದೆ ಇದ್ರೆ ನಾವು ಯಾಕೆ ಗ್ಯಾರಂಟಿ ಕೊಡಬೇಕು? ಹೀಗಾಗಿ ಈ ಅಭಿಯಾನದಲ್ಲಿ ಭಾಗಿಯಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಸಿಎಂ ಅಧಿಕಾರಿಗಳಿಂದ ಗಣತಿ ನಮೂನೆ ಪಡೆದು, ಭರ್ತಿ ಮಾಡಿದ ಸಿಎಂ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಮತದಾರರಿಗೆ ಪ್ರೇರಣೆ ನೀಡಿದ್ದಾರೆ. ಈ ವೇಳೆ ಸಿಎಂ ಅವರ ತವರೂರು ಕನಕಪುರ ಒಳಗೊಂಡ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *