
ಕಲರ್ಸ್ ಕನ್ನಡದಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಈ ಮೊದಲು ಪ್ರಸಾರ ಕಂಡು ಭಾರೀ ವೀಕ್ಷಣೆ ಕಂಡಿತ್ತು. ಹಲವು ವರ್ಷಗಳ ಕಾಲ ಈ ಸೀರಿಯಲ್ ಪ್ರಸಾರ ಆಯಿತು. ಈಗ ಧಾರಾವಾಹಿಯು ಮತ್ತೆ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯು ಪ್ರೋಮೋ ಹಂಚಿಕೊಂಡಿದೆ. ಇದು ವೀಕ್ಷಕರಿಗೆ ಸಾಕಷ್ಟು ಗಮನ ಸೆಳೆದಿದೆ. ಹಳೆಯ ಮ್ಯೂಸಿಕ್ ಅನ್ನು ಬಳಸಲಾಗಿದೆ.
‘ಅಗ್ನಿಸಾಕ್ಷಿ’ ಧಾರವಾಹಿಯು 2013ರ ಡಿಸೆಂಬರ್ 2ರಂದು ಪ್ರಸಾರ ಆರಂಭಿಸಿತು. ಆ ಬಳಿಕ ಧಾರಾವಾಹಿ ಬರೋಬ್ಬರಿ 6 ವರ್ಷ ಪ್ರಸಾರ ಕಂಡಿತು. ಈ ಧಾರಾವಾಹಿ 2020ರ ಜನವರಿ 3ರಂದು ಈ ಧಾರಾವಾಹಿ ಕೊನೆ ಆಯಿತು. ಬರೋಬ್ಬರಿ 1588 ಎಪಿಸೋಡ್ಗಳನ್ನು ಈ ಸೀರಿಯಲ್ ಪ್ರಸಾರ ಮಾಡಿತು. ಈ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ವಿಜಯ್ ಸೂರ್ಯ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ಈಗ ‘ಅಗ್ನಿಸಾಕ್ಷಿ’ ಧಾರಾವಾಹಿ ಮತ್ತೆ ಬರುತ್ತಿದೆ. ಈ ಧಾರಾವಾಹಿ ಪ್ರೋಮೋ ನೋಡಿ ವೀಕ್ಷಕರು ಖುಷಿಪಟ್ಟಿದ್ದಾರೆ. ಹಾಗಾದರೆ, ಈ ಧಾರಾವಾಹಿಗೆ ನಾಯಕ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಅಗ್ನಿಸಾಕ್ಷಿ’ ಧಾರಾವಾಹಿಗೆ ಶಮಂತ್ ಬ್ರೋ ಗೌಡ ನಾಯಕ ಎಂದು ಹೇಳಲಾಗುತ್ತಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಇದನ್ನೂ ಓದಿ: ‘ನನ್ನನ್ನೇಕೆ ಕುಳ್ಳಿ ಎಂದೆ’; ‘ಅಗ್ನಿಸಾಕ್ಷಿ’ ರೀಯೂನಿಯನ್ನಲ್ಲಿ ಸುಕೃತಾ-ವೈಷ್ಣವಿ ಸಖತ್ ಫನ್
ಈ ಮೊದಲು ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಬ್ರೋ ಗೌಡ ನಟಿಸಿದ್ದರು. ಈ ಧಾರಾವಾಹಿ ಗಮನ ಸೆಳೆಯಿತು. ಈ ಧಾರಾವಾಹಿ ಇತ್ತೀಚೆಗೆ ಪೂರ್ಣಗೊಂಡಿದೆ. ಆ ಬಳಿಕ ಅವರು ಹೊಸ ಜೀವನಕ್ಕೆ ಕಾಲಿಟ್ಟರು. ಅವರು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈಗ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಮಿಂಚಲು ಅವರು ರೆಡಿ ಆಗಿದ್ದಾರೆ.
ಶಮಂತ್ ಅವರು ಈ ಮೊದಲು ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿಸಿದ್ದರು. ಅಲ್ಲಿಂದ ಅವರಿಗೆ ಧಾರಾವಾಹಿ ಆಫರ್ ಬಂತು. ಈಗ ನಟನಾಗಿ ಅವರು ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.