Headlines

ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್​ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ – Kannada News | Shiva Rajkumar to do special role in Vijay Raghavendra starrer new movie Mahaan

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shiva Rajkumar) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಹೀರೋ ಆಗಿ ನಟಿಸುವುದರ ಜೊತೆಗೆ, ವಿಶೇಷ ಪಾತ್ರಗಳನ್ನು ಕೂಡ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ವಿಜಯ್ ರಾಘವೇಂದ್ರ ನಟನೆಯ ‘ಮಹಾನ್’ (Mahaan) ಸಿನಿಮಾದಲ್ಲಿ ಲಾಯರ್ ಪಾತ್ರ ಮಾಡಿದ್ದಾರೆ ಎಂಬ ವಿಷಯ ಗೊತ್ತಾಗಿದೆ. ಚಿತ್ರತಂಡವೇ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

‘ಮಹಾನ್’ ಸಿನಿಮಾವನ್ನು ‘ಆಕಾಶ್ ಪಿಕ್ಚರ್ಸ್’ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಾಣ ಮಾಡುತ್ತಿದ್ದಾರೆ. ಪಿ.ಸಿ. ಶೇಖರ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಮಹಾನ್’ ಚಿತ್ರದ ವಿಶೇಷವಾದ ಒಂದು ಪಾತ್ರದಲ್ಲಿ ಶಿವರಾಜ್​ಕುಮಾರ್ ಅವರು ನಟಿಸಿದ್ದಾರೆ ಎಂಬ ವಿಷಯ ತಿಳಿದ ಕೂಡಲೇ ಅಭಿಮಾನಿಗಳಿಗೆ ಈ ಸಿನಿಮಾದ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ.

ವಿಜಯ್ ರಾಘವೇಂದ್ರ ಅವರು ‘ಮಹಾನ್’ ಸಿನಿಮಾಗೆ ಹೀರೋ. ಇದೇ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರ ಮಾಡುವ ಮೂಲಕ ಬಹಳ ವರ್ಷಗಳ ನಂತರ ವಿಜಯ್ ರಾಘವೇಂದ್ರ ಜೊತೆ ಅವರು ತೆರೆಹಂಚಿಕೊಂಡಂತೆ ಆಗುತ್ತಿದೆ. ಈ ಮೊದಲು ‘ಭೈರತಿ ರಣಗಲ್’ ಸಿನಿಮಾದಲ್ಲಿ ಶಿವಣ್ಣ ಅವರು ಲಾಯರ್ ಪಾತ್ರ ಮಾಡಿದ್ದರು. ಈಗ ಮತ್ತೆ ‘ಮಹಾನ್’ ಸಿನಿಮಾದಲ್ಲಿ ಅವರು ಕಪ್ಪು ಕೋಟು ಧರಿಸಿದ್ದಾರೆ.

ಇದು ರೈತರ ಕುರಿತಾದ ಕಥೆ ಇರುವ ಸಿನಿಮಾ ಎಂದು ‘ಮಹಾನ್’ ಚಿತ್ರತಂಡ ಹೇಳಿದೆ. ಈ ಬಗ್ಗೆ ನಿರ್ದೇಶಕ ಪಿ.ಸಿ. ಶೇಖರ್ ಅವರು ಮಾತನಾಡಿದ್ದಾರೆ. ‘ಈ ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಮುಖ್ಯ ಪಾತ್ರಗಳಾಗಿರುತ್ತದೆ. ಮನೆಯಲ್ಲಿ ನಾವೇನಾದರೂ ತಪ್ಪು ಮಾಡಿದರೆ, ನಮಗೆ ಬುದ್ಧಿ ಹೇಳಲು ತಂದೆ-ತಾಯಿ ಇರುತ್ತಾರೆ. ಅಂಥ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾದಾಗ ಅಲ್ಲಿನ ತೊಂದರೆಗಳನ್ನು ತಿದ್ದಲು ಮಹಾನ್ ವ್ಯಕ್ತಿಯ ಅಗತ್ಯವಿರುತ್ತದೆ. ಅಂತಹ ವ್ಯಕ್ತಿಯ ಪಾತ್ರದಲ್ಲಿ ಶಿವರಾಜ್​ಕುಮಾರ್ ಅಭಿನಯಿಸಿದ್ದಾರೆ’ ಎಂದಿದ್ದಾರೆ ಪಿ.ಸಿ. ಶೇಖರ್.

ಇದನ್ನೂ ಓದಿ: ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿದ ಶಿವಣ್ಣ ಫ್ಯಾನ್ಸ್

‘ಚಿತ್ರದಲ್ಲಿ ಈ ಪಾತ್ರ ಬಹಳ ಪ್ರಮುಖವಾದದ್ದು. ಎಲ್ಲಾ ನಿರ್ದೇಶಕರಿಗೂ ಶಿವರಾಜ್​ಕುಮಾರ್ ಅವರ ಸಿನಿಮಾಗೆ ನಿರ್ದೇಶನ ಮಾಡುವ ಆಸೆ ಇರುತ್ತದೆ. ನನಗೂ ಅದು ಬಹಳ ದಿನಗಳ ಹಂಬಲ. ಆ ಆಸೆ ಈಗ ಈಡೇರಿದೆ. ಶಿವರಾಜ್​ಕುಮಾರ್ ಅವರು ನಟಿಸಿರುವುದು ನಿರ್ಮಾಪಕ ಪ್ರಕಾಶ್ ಬುದ್ದೂರು ಅವರಿಗೂ ತುಂಬಾ ಸಂತೋಷ ತಂದಿದೆ. ಇಡೀ ‘ಮಹಾನ್’ ಚಿತ್ರತಂಡದಿಂದ ಶಿವಣ್ಣ ಅವರಿಗೆ ತುಂಬು ಹೃದಯದ ಧನ್ಯವಾದಗಳು’ ಎಂದು ಪಿ.ಸಿ. ಶೇಖರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *