2025 ರ ಜನವರಿ 16 ರಂದು ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು ವರ್ಷದ ಕೊನೆಯಲ್ಲಿ ವಿವಾಹ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಆರತಕ್ಷತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿವಾಹ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು ದಂಪತಿಗಳಿಗೆ ಶುಭಹಾರೈಸಿದ್ದಾರೆ. ಇದೀಗ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ ಮೋದಿ ದಂಪತಿಗಳಿಗೆ ಉಡುಗೊರೆಗಳನ್ನು ನೀಡುತ್ತಿರುವುದು ಮತ್ತು ಅವರೊಂದಿಗೆ ಫೋಟೋಶೂಟ್‌ಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದಾಗಿದೆ. ಆ ಬಳಿಕ ದಂಪತಿಗಳನ್ನು ಆಶೀರ್ವದಿಸಿರುವ ಮೋದಿ ಅವರೊಂದಿಗೆ ಕೆಲ ಸಮಯ ಮಾತನಾಡಿ ಅಲ್ಲಿಂದ ತೆರಳಿದ್ದಾರೆ.
