
ಆಗ್ರಾ,ಮಾರ್ಚ್ 13: ಮದುವೆ(Marriage)ಯಾಗುವುದಾಗಿ ನಂಬಿಸಿ 4 ವರ್ಷ ಲಿವ್-ಇನ್ ಸಂಬಂಧದಲ್ಲಿದ್ದು ಪೊಲೀಸ್ ಕಾನ್ಸ್ಟೆಬಲ್ ಕೈಕೊಟ್ಟಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ವರ್ಷಗಳ ಕಾಲ ಆತ ದೈಹಿಕ ಹಾಗೂ ಮಾನಸಿಕ ಶೋಷಣೆಯಾಗಿದೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಜ್ಗಂಜ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ ತನ್ನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು ಎಂದು ಮಹಿಳೆ ಹೇಳಿದ್ದಾಳೆ. ಮದುವೆಯಾಗುವ ಭರವಸೆ ನೀಡಿದ್ದ ತಾನು ಆತನೊಂದಿಗೆ ಪತ್ನಿಯಂತೆಯೇ ಸಂಸಾರ ನಡೆಸಿದ್ದೇನೆ ಬಳಿಕ ಆತ ಮದುವೆಯಾಗಲು ನಿರಾಕರಿಸಿದ್ದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾಳೆ.
ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ, ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಕಾನ್ಸ್ಟೆಬಲ್ ತನ್ನ ಕುಟುಂಬದವರು ತಮ್ಮ ಮದುವೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾಗಿ ಮಹಿಳೆ ಹೇಳಿದ್ದಾಳೆ. ತಾನು ನ್ಯಾಯಕ್ಕಾಗಿ ಹಲವು ಬಾರಿ ಪ್ರಯತ್ನಿಸಿದ್ದರೂ ಸಹಾಯ ಸಿಗಲಿಲ್ಲ ಎಂದು ಕೂಡ ಹೇಳಿದ್ದಾಳೆ.
ಮತ್ತಷ್ಟು ಓದಿ: ಯುವತಿಯರನ್ನು ಮನೆಯೊಳಗೆ ಕಳಿಸಿ , ಅತ್ಯಾಚಾರ ನಾಟಕವಾಡಿಸಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿ ಮದುವೆ ದಿನವೇ ಅರೆಸ್ಟ್
ಘಟನೆ ಬೆಳಕಿಗೆ ಬಂದ ಬಳಿಕ ಉತ್ತರ ಪ್ರದೇಶದ ಪೊಲೀಸ್ ಇಲಾಖೆ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಷ್ಟು ವರ್ಷಗಳ ಕಾಲ ಒಟ್ಟಿಗೆ ಇದ್ದು ಈಗ ಕಾನ್ಸ್ಟೆಬಲ್ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದಾನೆ.
ವಿಡಿಯೋದಲ್ಲಿರುವ ಮಹಿಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೂ ಮನವಿ ಮಾಡಿಕೊಂಡಿದ್ದು, ತಾನು ಬದುಕಿದ್ದಾಗ ನ್ಯಾಯ ಸಿಕ್ಕಿಲ್ಲ ಮತ್ತು ತನ್ನ ಮರಣದ ನಂತರ ನ್ಯಾಯ ಕೊಡಿಸಿ ಎಂದು ಬೇಡಿಕೊಂಡಿದ್ದಾಳೆ.
ಆ ಮಹಿಳೆ ಮೂಲತಃ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯವಳು. ಆಕೆಗೆ ಈ ಹಿಂದೆ ಮದುವೆಯಾಗಿ ವಿಚ್ಛೇದನವೂ ಆಗಿತ್ತು. ಆಗ್ರಾದಲ್ಲಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದಾಗ ಕಾನ್ಸ್ಟೇಬಲ್ ಅವರನ್ನು ಭೇಟಿಯಾಗಿದ್ದಳು. ಈ ವಿಡಿಯೋಗಳು ವೈರಲ್ ಆಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ನಂತರ, ಕಾನ್ಸ್ಟೆಬಲ್ ಜೆ.ವಿ. ಗೌತಮ್ ಅವರನ್ನು ಅಮಾನತುಗೊಳಿಸಲಾಗಿದೆ. ಮಹಿಳೆಯ ತಂದೆ ನೀಡಿದ ದೂರಿನ ಮೇರೆಗೆ, ಕಾನ್ಸ್ಟೆಬಲ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗ ಇಡೀ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ