ಮಧ್ಯರಾತ್ರಿ ಜವರಾಯನ ಅಟ್ಟಹಾಸ: ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ಭೀಕರ ಅಪಘಾತಕ್ಕೆ ಬಲಿ

ಮಧ್ಯರಾತ್ರಿ ಜವರಾಯನ ಅಟ್ಟಹಾಸ: ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ಭೀಕರ ಅಪಘಾತಕ್ಕೆ ಬಲಿ

ದೇವನಹಳ್ಳಿ, ಮಾರ್ಚ್​​ 22: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

15 ದಿನಗಳ ಪ್ರವಾಸಕ್ಕೆಂದು ಒಂದೇ ಏರಿಯಾದ ಜನರು ಹೊರಟಿದ್ದರು. ಸ್ತ್ರೀ ಶಕ್ತಿ ಸಂಘಟನೆ ಚೀಟಿ ಮೂಲಕ‌ ಪ್ರವಾಸದ ಪ್ಲಾನ್ ಮಾಡಿದ್ದ 12 ಜನರ ತಂಡ ಇಂದು ಬೆಳಗ್ಗೆ 6 ಗಂಟೆಯ ಪ್ಲೈಟ್ ನಲ್ಲಿ ಕಾಶಿಗೆ ಟಿಕೆಟ್ ಬುಕ್ ಮಾಡಿತ್ತು. ಹೀಗಾಗಿ ತಿಪಟೂರಿನಿಂದ ಕೆಂಪೇಗೌಡ ಏರ್ಪೋರ್ಟ್​​ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್​​ಪೋರ್ಟ್​​ನ ಟರ್ಮಿನಲ್​​ ದಾರಿಯ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಗೂಗಲ್ ಮ್ಯಾಪ್ ಹಾಕಿಕೊಂಡು ಟಿಟಿ ಚಾಲಕ ವಾಹನ ಚಾಲನೆ ಮಾಡುತ್ತಿದ್ದ. ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್​​ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಪಾಸ್ ಆಗಿದ್ದ ಟಿಟಿ ವಾಹನ ಮುಂದಿನ ಟರ್ನಿಂಗ್​​ನಲ್ಲಿ ಯೂಟರ್ನ್​​ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿಯ ಎಡಭಾಗ ಸಂಪೂರ್ಣ ಜಖಂ ಆಗಿದ್ದು, ಸಿಂಗಲ್ ಸೀಟ್ಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರ ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ:  ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!

ಅಪಘಾತದ ಬಗ್ಗೆ ಟಿವಿ9ಗೆ ಸಂಚಾರಿ ವಿಭಾಗ ಎಸಿಪಿ ಪ್ರದೀಪ್‌‌‌ ಪ್ರತಿಕ್ರಿಯಿಸಿದ್ದು, ಟಿಟಿ ವಾಹನ ಏರ್ಪೋರ್ಟ್​​ಗೆ ಡ್ರಾಪ್ ಕೊಡುವುದಕ್ಕೆಂದು ತೆರಳುತ್ತಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಬರ್ತಿದ್ದ ಚಾಲಕ ವೇಳೆ ರೋಡ್ ಮಿಸ್ ಆಗಿ ಮುಂದೆ ಬಂದಿದ್ದಾನೆ. ರೈಟ್ ಸೈಡ್ ಅಲ್ಲಿ ಇದ್ದ ಟಿಟಿ ಸೆಂಟರ್ ಲೈನ್​​ಗೆ ಸಡನ್ ಆಗಿ ಬಂದಿದೆ. ಈ ವೇಳೆ ಪಕ್ಕದಲ್ಲಿದ್ದ ಲಾರಿ ಡಿಕ್ಕಿ ಹೊಡೆದಿದೆ. ಒವರ್ ಸ್ಪೀಡ್ ಇದ್ದ ಕಾರಣ ಇಷ್ಟು ದೊಡ್ಡ ಅಪಘಾತವಾಗಿರುವ ಶಂಕೆ ಇದೆ. ಅಪಘಾತದ ನಂತರ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *